SUDDILIVE || SHIVAMOGGA
ಯುವತಿಯೊಂದಿಗೆ ಅನುಚಿತ ವರ್ತನೆ: ವ್ಯಕ್ತಿ ವಿರುದ್ಧ ಲಘು ಪ್ರಕರಣ ದಾಖಲಿಸಿ ಕ್ರಮ- Inappropriate behavior with young woman: Minor case registered against man, action taken
ಶಿವಮೊಗ್ಗ: ಸಾರ್ವಜನಿಕ ಸ್ಥಳದಲ್ಲಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಸೆಪ್ಟೆಂಬರ್ 15ರಂದು ಶಿವಮೊಗ್ಗದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅಕ್ಕ ಪಡೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಬಳಿಕ ಆತನನ್ನು ಮುಂದಿನ ಕ್ರಮಕ್ಕಾಗಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆತಂದು, ಆತನ ವಿರುದ್ಧ ಲಘು ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸದಂತೆ ಎಚ್ಚರಿಕೆ ನೀಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಹಾಗೂ ಯುವತಿಯರಿಗೆ ತೊಂದರೆ ನೀಡುವವರ ವಿರುದ್ಧ ಅಕ್ಕ ಪಡೆ ನಿಗಾ ವಹಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
