SUDDILIVE || SHIVAMOGGA
ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಸಿಲಿಂಡರ್ ಸ್ಫೋಟ: ಲಾರಿ ಗ್ಯಾರೇಜ್ ಬೆಂಕಿಗಾಹುತಿ-Cylinder explosion on Shimoga bypass road: Lorry garage caught fire
ಶಿವಮೊಗ್ಗ: ನಗರದ ವಾದಿ-ಎ-ಹುದಾದಲ್ಲಿರುವ ಗ್ಯಾಲಕ್ಸಿ ಹಾಲ್ ಎದುರಿನ ಟಿಂಕರಿಂಗ್ ಲಾರಿ ಗ್ಯಾರೇಜ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಪಕ್ಕದ ನಯಾಜ್ ಅವರ ಟಿಂಕರಿಂಗ್ ಶಾಪ್ ನಲ್ಲಿದ್ದ ಸಿಲಿಂಡರ್ ವೊಂದು ಸ್ಫೋಟಗೊಂಡಿದೆ. ಬಳಿಕ ಗ್ಯಾರೇಜ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಗ್ಯಾರೇಜ್‌ನಾದ್ಯಂತ ವ್ಯಾಪಿಸಿದೆ. ಪರಿಣಾಮ ಗ್ಯಾರೇಜ್‌ನಲ್ಲಿದ್ದ ವಿವಿಧ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸಕಾಲಿಕ ಕಾರ್ಯಾಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಘಟನೆ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾದಿ-ಎ-ಹುದದಲ್ಲಿ ನಡೆದಿದ್ದು, ಪ್ರಾಥಮಿಕ ಮಾಹಿತಿಯಂತೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ಹಾಗೂ ಸಂಭವಿಸಿರುವ ಆಸ್ತಿ ನಷ್ಟದ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಪರಿಶೀಲನೆಯ ಬಳಿಕ ತಿಳಿದುಬರಬೇಕಿದೆ.

