SUDDILIVE || SHIVAMOGGA
ಶಿವಮೊಗ್ಗದಲ್ಲಿ ಸೆ.18ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ- Live interviews for job seekers on September 18th in Shivamogga
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗಾಗಿ ಸೆಪ್ಟೆಂಬರ್ 18ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.
ಸೆ.18ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಅಪೋಲೋ ಫಾರ್ಮಸಿ ಪ್ರೈ.ಲಿ. ಹಾಗೂ ಮುತ್ತೂಟ್ ಮೈಕ್ರೋ ಫಿನ್ ಪ್ರೈ.ಲಿ. ಖಾಸಗಿ ಕಂಪನಿಗಳು ಭಾಗವಹಿಸಲಿವೆ. ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.
ಯಾರು ಭಾಗವಹಿಸಬಹುದು?
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ 18ರಿಂದ 35 ವರ್ಷ ವಯೋಮಾನದ ಉದ್ಯೋಗಾಕಾಂಕ್ಷಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಸಂದರ್ಶನಕ್ಕೆ ಉಚಿತ ಪ್ರವೇಶವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರವಾಗಿ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ,
ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್,
ಸಾಗರ ರಸ್ತೆ, ಶಿವಮೊಗ್ಗ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಅಥವಾ 9380663606 / 9108235132 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
