SUDDILIVE || SHIVAMOGGA
ಶಿವಮೊಗ್ಗದಲ್ಲಿ 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಲೋಕಾಯುಕ್ತ ಬಲೆಗೆ-District Fire Officer caught by Lokayukta for accepting bribe of Rs. 1 lakh in Shivamogga
ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಶಿಕಾರಿಪುರ ಟೌನ್‌ನಲ್ಲಿರುವ ಶಾಲೆಯೊಂದರ ನೂತನ ಕಟ್ಟಡಕ್ಕೆ ಅಗ್ನಿಶಾಮಕ ದಳದಿಂದ ಎನ್‌ಒಸಿ ಪಡೆಯಬೇಕಿತ್ತು. ಈ ಎನ್‌ಒಸಿ ನೀಡಲು ಅಧಿಕಾರಿ ಅಶೋಕ್ ಕುಮಾರ್ ಅವರು ದೂರುದಾರ ಅನೂಪ್ ಅವರ ಬಳಿ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಲಂಚ ನೀಡಲು ಇಚ್ಛಿಸದ ಅನೂಪ್ ಅವರು ಈ ಕುರಿತು ಶಿವಮೊಗ್ಗ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆಗೆ ಯೋಜನೆ ರೂಪಿಸಿದ್ದರು.
ಅದರಂತೆ, ಇಂದು ದೂರುದಾರರಿಂದ ಅಶೋಕ್ ಕುಮಾರ್ ಅವರು ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿಯನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್‌ಪೆಕ್ಟರ್‌ಗಳಾದ ವೀರಬಸಪ್ಪ, ರುದ್ರೇಶ್ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಅಶೋಕ್ ಕುಮಾರ್ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕಳೆದ ನಾಲ್ಕು ವರ್ಷದಲ್ಲಿ ಅಗ್ನಿಶಾಮಕ ದಳದವರು ಲೋಕಾಯುಕ್ತ ಮತ್ತು ಎಸಿಬಿ ರೈಡ್ ನಲ್ಲಿ ಎರಡಬೇ ಪ್ರಜರಣವಾಗಿದೆ. ಮೊದಲು ಮಂಜುನಾಥ್ ಎಂಬುವರು ಎಸಿಬಿ ದಾಳಿಯಲ್ಲಿ ಸಿಲುಕಿದ್ದರು.
District Fire Officer caught by Lokayukta for accepting bribe of Rs. 1 lakh in Shivamogga
