ಸೆ.6 ಮತ್ತು 7ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ-Drinking water supply disruption in Shivamogga city on September 6 and 7.

 SUDDILIVE || SHIVAMOGGA

ಸೆ.6 ಮತ್ತು 7ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ-Drinking water supply disruption in Shivamogga city on September 6 and 7.   
Drinking, water

ಶಿವಮೊಗ್ಗ: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವ ಮೆಸ್ಕಾಂ ಇಲಾಖೆಯ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಸೆಪ್ಟೆಂಬರ್ 6ರಂದು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದ್ದು, ಇದರ ಪರಿಣಾಮವಾಗಿ ಸೆಪ್ಟೆಂಬರ್ 6 ಮತ್ತು 7ರಂದು ಶಿವಮೊಗ್ಗ ನಗರದಾದ್ಯಂತ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೈಗೊಳ್ಳಲಾಗುತ್ತಿರುವ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿಯಿಂದ ಜಲಶುದ್ಧೀಕರಣ ಘಟಕದ ಕಾರ್ಯಾಚರಣೆಗೆ ಅಡಚಣೆಯಾಗಲಿರುವುದರಿಂದ ಈ ತಾತ್ಕಾಲಿಕ ವ್ಯತ್ಯಯ ಎದುರಾಗಲಿದೆ.

ಹೀಗಾಗಿ ನಗರದ ಸಾರ್ವಜನಿಕರು ಸೆಪ್ಟೆಂಬರ್ 6 ಮತ್ತು 7ರಂದು ಎದುರಾಗಬಹುದಾದ ನೀರಿನ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಅಗತ್ಯಕ್ಕೆ ತಕ್ಕಷ್ಟು ನೀರನ್ನು ಮುಂಚಿತವಾಗಿ ಶೇಖರಿಸಿಟ್ಟುಕೊಳ್ಳುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWS&DB) ಮನವಿ ಮಾಡಿದೆ.

ಈ ತಾತ್ಕಾಲಿಕ ಸಮಸ್ಯೆಗೆ ಸಾರ್ವಜನಿಕರು ಸಹಕರಿಸುವಂತೆ ಮಂಡಳಿಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

Drinking water supply disruption in Shivamogga city on September 6 and 7

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close