SUDDILIVE || SHIVAMOGGA
ಶಿವಮೊಗ್ಗ: ಗ್ರಾಮ ಪಂಚಾಯಿತಿಗಳ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿಗೆ ತಾತ್ಕಾಲಿಕ ತಡೆ-Shivamogga: Temporary stay on the recruitment of Gram Panchayat Clerk-cum-Data Entry Operators.
ಶಿವಮೊಗ್ಗ: ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಈ ಹಿಂದೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರ ಹಾಗೂ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇರ ನೇಮಕಾತಿ ಕೈಗೊಳ್ಳಲು ಅರ್ಜಿ ಆಹ್ವಾನಿಸಲಾಗಿತ್ತು. ಸರ್ಕಾರದ ನಿಯಮಾನುಸಾರ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಅಧಿಕೃತ ವೆಬ್‌ಸೈಟ್ ಮೂಲಕ ಆಗಸ್ಟ್ 27ರಿಂದ ಸೆಪ್ಟೆಂಬರ್ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಆದರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪತ್ರ ಸಂಖ್ಯೆ RDPR/06/GPC/2026, ದಿನಾಂಕ 03-09-2026ರ ಆದೇಶದ ಹಿನ್ನೆಲೆಯಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಯನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಈ ಕುರಿತು ಆಗಸ್ಟ್ 27ರಂದು ಜಿಲ್ಲಾ ಪಂಚಾಯಿತಿಯಿಂದ ಹೊರಡಿಸಲಾಗಿದ್ದ ನೇಮಕಾತಿ ಅಧಿಸೂಚನೆಯನ್ನು ಸಹ ಸರ್ಕಾರದ ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದೇ ವೇಳೆ ಕರವಸೂಲಿಗಾರರ ಹುದ್ದೆಗಳ ನೇಮಕಾತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾ ಪಂಚಾಯಿತಿ ಸ್ಪಷ್ಟಪಡಿಸಿದೆ. ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಎಂದಿನಂತೆ ಮುಂದುವರಿಯಲಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಆಡಳಿತದ ಅಧಿಕೃತ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯಿತಿ ತಿಳಿಸಿದೆ.
