ನಾಳೆ ಮಹಿಳಾ ದಸರಾ–2026ರ ಪೂರ್ವ ಭಾವಿ ಸಭೆ- Women's Dussehra 2026 pre-planning meeting tomorrow

SUDDILIVE || SHIVAMOGGA

ನಾಳೆ ಮಹಿಳಾ ದಸರಾ–2026ರ ಪೂರ್ವ ಭಾವಿ ಸಭೆ- Women's Dussehra 2026 pre-planning meeting tomorrow 

Mahila dussara

 


ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿ ವತಿಯಿಂದ ಮಹಿಳಾ ದಸರಾ–2026 ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಮಹಿಳಾ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಕಲಾವಿದರೊಂದಿಗೆ ಪೂರ್ವಭಾವಿ ಸಭೆ ಕರೆಯಲಾಗಿದೆ.

ಮಹಿಳಾ ದಸರಾ–2026: ಸೆ.17ರಂದು ಪೂರ್ವಭಾವಿ ಸಭೆ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿ ವತಿಯಿಂದ ಮಹಿಳಾ ದಸರಾ–2026 ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದಲ್ಲಿ ವಿವಿಧ ಮಹಿಳಾ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಮಹಿಳೆಯರು ಹಾಗೂ ವಿವಿಧ ಮಹಿಳಾ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗಾಗಿ ಸೆಪ್ಟೆಂಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಸಭೆಯಲ್ಲಿ ಮಹಿಳಾ ದಸರಾ–2026ರ ಅಂಗವಾಗಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಿ, ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಕಲಾವಿದರ ಸಹಭಾಗಿತ್ವದ ಬಗ್ಗೆ ರೂಪುರೇಷೆ ಸಿದ್ಧಪಡಿಸುವ ನಿರೀಕ್ಷೆಯಿದೆ.

ನಗರದ ಎಲ್ಲಾ ಮಹಿಳಾ ಸಂಘ-ಸಂಸ್ಥೆಗಳು ಹಾಗೂ ಆಸಕ್ತ ಮಹಿಳೆಯರು ಸಭೆಯಲ್ಲಿ ಭಾಗವಹಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿಯ ಸಮುದಾಯ ವ್ಯವಹಾರಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ ಕೋರಿದ್ದಾರೆ.

Women's Dussehra 2026 pre-planning meeting tomorrow    


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close