ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ-Applications invited for the post of Medical Officer at Meggan Hospital

 SUDDILIVE || SHIVAMOGGA

ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ-Applications invited for the post of Medical Officer at Meggan Hospital 
Meggan, hospital



ಶಿವಮೊಗ್ಗ, ಸೆ.18: ಶಿವಮೊಗ್ಗದ ಜಿಲ್ಲಾ ಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಎ.ಆರ್.ಟಿ. ವಿಭಾಗದಲ್ಲಿ ಖಾಲಿ ಇರುವ ಒಂದು ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರಬೇಕು. ಸಂಬಂಧಿತ ಅನುಭವ ಹೊಂದಿರುವ ಹಾಗೂ 70 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ ರೂ.72,000 ಗೌರವಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾ, ವಿದ್ಯಾರ್ಹತೆ ಹಾಗೂ ಅನುಭವ ಪ್ರಮಾಣಪತ್ರಗಳ ಜೆರಾಕ್ಸ್ ಪ್ರತಿಗಳೊಂದಿಗೆ ನೇರವಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಸೆಪ್ಟೆಂಬರ್ 23, 2026ರ ಸಂಜೆ 4 ಗಂಟೆಯೊಳಗೆ ‘ಜಿಲ್ಲಾ ಸರ್ಜನ್, ಮೆಗ್ಗಾನ್ ಬೋಧನಾ ಆಸ್ಪತ್ರೆ, ಶಿವಮೊಗ್ಗ’ ಅವರ ಕೊಠಡಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಸರ್ಜನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications invited for the post of Medical Officer at Meggan Hospital

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close