ಶಿವಮೊಗ್ಗದಲ್ಲಿ ಬಿಜೆಪಿಯನ್ನು ಸೋಲಿಸಲು ಈಶ್ವರಪ್ಪ ಮುಂದಾಗಿದ್ದಾರೆ: ಶಾಸಕ ಚನ್ನಬಸಪ್ಪ ಅಸಮಾಧಾನ-Eshwarappa is set to defeat the BJP in Shivamogga: MLA Channabasappa expresses displeasure.

SUDDILIVE || SHIVAMOGGA

ಶಿವಮೊಗ್ಗದಲ್ಲಿ ಬಿಜೆಪಿಯನ್ನು ಸೋಲಿಸಲು ಈಶ್ವರಪ್ಪ ಮುಂದಾಗಿದ್ದಾರೆ: ಶಾಸಕ ಚನ್ನಬಸಪ್ಪ ಅಸಮಾಧಾನ-Eshwarappa is set to defeat the BJP in Shivamogga: MLA Channabasappa expresses displeasure.   

Mla, shivamogga

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದ ರಾಜಕೀಯ ಚಟುವಟಿಕೆಗಳ ಕುರಿತು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಚನ್ನಬಸಪ್ಪ, ರಾಷ್ಟ್ರಭಕ್ತರ ಬಳಗ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಹೊಂದಿದ್ದ ಉದ್ದೇಶಕ್ಕೂ, ಇದೀಗ ಶಿವಮೊಗ್ಗದಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಗೂ ವ್ಯತ್ಯಾಸ ಕಂಡುಬರುತ್ತಿದೆ ಎಂದು ಹೇಳಿದರು.

“ಶಿವಮೊಗ್ಗದಲ್ಲಿ ಬಿಜೆಪಿಯನ್ನು ಸೋಲಿಸುವ ಪ್ರಯತ್ನ ನಡೆಯುತ್ತಿರುವುದು ಕಂಡುಬರುತ್ತಿದೆ. ಇದು ಕಾಂಗ್ರೆಸ್‌ನಿಂದ ಆಗುತ್ತಿರುವುದಲ್ಲ ಎಂಬುದನ್ನು ಎಲ್ಲರೂ ಯೋಚಿಸಬೇಕು. ಈ ರೀತಿಯ ಬೆಳವಣಿಗೆಯನ್ನು ಕೆ.ಎಸ್. ಈಶ್ವರಪ್ಪ ಅವರಿಂದ ಬಿಜೆಪಿ ನಿರೀಕ್ಷಿಸಿರಲಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ರಾಷ್ಟ್ರಭಕ್ತರ ಬಳಗದಲ್ಲಿ ಬಿಜೆಪಿ ಕಾರ್ಯಕರ್ತರೂ ಭಾಗಿಯಾಗಿರುವುದನ್ನು ಉಲ್ಲೇಖಿಸಿದ ಅವರು, ರಾಜಕೀಯವಾಗಿ ಚುನಾವಣೆಗೆ ಸ್ಪರ್ಧಿಸುವುದಕ್ಕೆ ತಮ್ಮ ಆಕ್ಷೇಪವಿಲ್ಲ ಎಂದರು.

“ಮುಂದಿನ ದಿನಗಳಲ್ಲಿ ನೀವು ಚುನಾವಣೆಗೆ ಸ್ಪರ್ಧಿಸುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಗೊಂದಲ ಸೃಷ್ಟಿಸುವ ಕೆಲಸ ಮಾಡಬಾರದು. ಇದು ನಿಮ್ಮಿಂದ ನಿರೀಕ್ಷಿಸಿರಲಿಲ್ಲ” ಎಂದು ಈಶ್ವರಪ್ಪ ಅವರನ್ನು ಉದ್ದೇಶಿಸಿ ಪರೋಕ್ಷವಾಗಿ ಸಂದೇಶ ನೀಡಿದರು.

ಬಿಜೆಪಿ ಹಿಂದುತ್ವದ ರಕ್ಷಣೆಗಾಗಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ ಶಾಸಕ ಚನ್ನಬಸಪ್ಪ, ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಯಾರೇ ರಾಜಕೀಯವಾಗಿ ಮುನ್ನಡೆದರೂ ಬಿಜೆಪಿ ಕಾರ್ಯಕರ್ತರು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಶಿವಮೊಗ್ಗ ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Eshwarappa is set to defeat the BJP in Shivamogga: MLA Channabasappa expresses displeasure.   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close