ಸೆ. 5ರಂದು ಶಿವಮೊಗ್ಗ ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ- Power disruption in Shivamogga rural areas on September 5.

SUDDILIVE || SHIVAMOGGA

ಸೆ. 5ರಂದು ಶಿವಮೊಗ್ಗ ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ- Power disruption in Shivamogga rural areas on September 5.  

Power, cut



ಶಿವಮೊಗ್ಗ: ಶಿವಮೊಗ್ಗದ ಗಾಜನೂರು ಗ್ರಾಮೀಣ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಸೆ. 5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳಲ್ಲಿ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳಿ ಹಾಗೂ ಭೋವಿಕಾಲೋನಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಒಳಗೊಂಡಿವೆ.

ನಿಗದಿತ ಅವಧಿಯಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಮೆಸ್ಕಾಂ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Power disruption in Shivamogga rural areas on September 5.  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close