ಶಿವಮೊಗ್ಗ ನಗರ ಶಾಲೆಗಳಿಗೆ ಮಹತ್ವದ ಸೂಚನೆ: ಸೆ.25ರಂದು ಮಧ್ಯಾಹ್ನ ರಜೆ- Important notice for Shivamogga city schools: Afternoon holiday on September 25th

SUDDILIVE || SHIVAMOGGA

ಶಿವಮೊಗ್ಗ ನಗರ ಶಾಲೆಗಳಿಗೆ ಮಹತ್ವದ ಸೂಚನೆ: ಸೆ.25ರಂದು ಮಧ್ಯಾಹ್ನ ರಜೆ-  Important notice for Shivamogga city schools: Afternoon holiday on September 25th 

School, holiday



ಶಿವಮೊಗ್ಗ ನಗರದಲ್ಲಿ ಸೆಪ್ಟೆಂಬರ್ 25ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಶಾಲೆಗಳ ಕಾರ್ಯನಿರ್ವಹಣೆಯಲ್ಲಿ ಬದಲಾವಣೆ ಮಾಡಲಾಗಿದೆ.

ಶಿವಮೊಗ್ಗ ನಗರ ವ್ಯಾಪ್ತಿಯ ಎಲ್ಲಾ ಮುಖ್ಯ ಶಿಕ್ಷಕರಿಗೆ ತಹಶೀಲ್ದಾರರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತುರ್ತು ಸೂಚನೆ ನೀಡಿದ್ದಾರೆ.

ಸೂಚನೆಯಂತೆ, ಸೆಪ್ಟೆಂಬರ್ 25ರ ಶುಕ್ರವಾರ ಬೆಳಗಿನ ಅವಧಿಯಲ್ಲಿ ಬೆಳಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಪರೀಕ್ಷಾ ಕಾರ್ಯವನ್ನು ನಡೆಸಬೇಕು. ಮಧ್ಯಾಹ್ನದ ಅವಧಿಯಲ್ಲಿ ನಡೆಯಬೇಕಿದ್ದ ತರಗತಿಗಳನ್ನು ಮುಂದಿನ ದಿನಗಳಲ್ಲಿ ಸರದೂಗಿಸುವ ಷರತ್ತಿನೊಂದಿಗೆ, ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆ ತಲುಪುವಂತೆ ಮಧ್ಯಾಹ್ನ ರಜೆ ಘೋಷಿಸುವಂತೆ ತಿಳಿಸಲಾಗಿದೆ.

ಆದರೆ SSLC ವಿದ್ಯಾರ್ಥಿಗಳಿಗೆ ಈ ಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ನಿಗದಿತ ರಾಜ್ಯ ಮಟ್ಟದ ವೇಳಾಪಟ್ಟಿಯಂತೆ ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರವರೆಗೆ ಅರ್ಧವಾರ್ಷಿಕ ಪರೀಕ್ಷೆ ನಡೆಯಲಿದೆ.

ಗಣಪತಿ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಜನದಟ್ಟಣೆ ಹಾಗೂ ಸಂಚಾರದ ಒತ್ತಡ ಉಂಟಾಗುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

Important notice for Shivamogga city schools: Afternoon holiday on September 25th 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close