ಶಿವಮೊಗ್ಗದಲ್ಲಿ ಸೆ.24ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ-Live interviews for job seekers in Shivamogga on September 24th

 SUDDILIVE || SHIVAMOGGA

ಶಿವಮೊಗ್ಗದಲ್ಲಿ ಸೆ.24ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ-Live interviews for job seekers in Shivamogga on September 24th    

Shivamogga, interview




ಶಿವಮೊಗ್ಗ, ಸೆ.21:
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗಾಗಿ ಸೆಪ್ಟೆಂಬರ್ 24ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ನೇರ ಸಂದರ್ಶನದಲ್ಲಿ ಆರ್-ಕ್ಯೂಬ್ ಅಕಾಡೆಮಿ ಪ್ರೈ.ಲಿ. ಖಾಸಗಿ ಸಂಸ್ಥೆ ಭಾಗವಹಿಸಲಿದ್ದು, ಸಂಸ್ಥೆಯಲ್ಲಿರುವ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಯಾವುದೇ ಪದವಿ ತೇರ್ಗಡೆಯಾದ 18ರಿಂದ 35 ವರ್ಷ ವಯೋಮಾನದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.

ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ 9380663606 / 9108235132 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Live interviews for job seekers in Shivamogga on September 24th    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close