SUDDILIVE || SHIVAMOGGA
ಶಂಕರಮಠ ಸರ್ಕಲ್, ಹೊಳೆ ಬಸ್ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ-Action taken to control traffic congestion at Shankaramatha Circle, Hole bus stand
ಶಿವಮೊಗ್ಗ: ನಗರದ ಶಂಕರಮಠ ಸರ್ಕಲ್ ಹಾಗೂ ಹೊಳೆ ಬಸ್ ನಿಲ್ದಾಣಗಳಲ್ಲಿ ಪೀಕ್ ಅವರ್ ಸಮಯದಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಿ, ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಶಂಕರಮಠ ಸರ್ಕಲ್‌ನ ಸಿಗ್ನಲ್‌ನಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಫ್ರೀ ಲೆಫ್ಟ್ (Free Left) ಸಮಯವನ್ನು ಹೆಚ್ಚಿಸಲಾಗಿದೆ. ಇದರಿಂದ ಸಿಗ್ನಲ್‌ನಲ್ಲಿ ವಾಹನಗಳ ಸರದಿ ಹಾಗೂ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದೆ.
ಇದೇ ವೇಳೆ, ಶಂಕರಮಠ ಸರ್ಕಲ್‌ನ ಫುಟ್‌ಪಾತ್‌ನಲ್ಲಿ ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಬೋರ್ಡ್‌ಗಳನ್ನು ತೆರವುಗೊಳಿಸಲಾಗಿದೆ. ಪಾದಚಾರಿಗಳು ಸುರಕ್ಷಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಫುಟ್‌ಪಾತ್ ತೆರವುಗೊಳಿಸುವ ಕ್ರಮ ಕೈಗೊಳ್ಳಲಾಗಿದೆ.
ಹೊಳೆ ಬಸ್ ನಿಲ್ದಾಣದಲ್ಲಿಯೂ ಸಿಟಿ ಬಸ್‌ಗಳು ನಿಗದಿತ ಸ್ಥಳದಲ್ಲೇ ನಿಲುಗಡೆಗೊಳ್ಳುವಂತೆ ಬಸ್‌ವೇಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಇದರಿಂದ ಬಸ್‌ಗಳ ಅನಿಯಮಿತ ನಿಲುಗಡೆಯಿಂದ ಉಂಟಾಗುವ ಸಂಚಾರ ಸಮಸ್ಯೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ.
ಸಾರ್ವಜನಿಕರು ಹಾಗೂ ವಾಹನ ಸವಾರರು ಹೊಸ ಸಂಚಾರ ವ್ಯವಸ್ಥೆ ಮತ್ತು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಾರ್ವಜನಿಕ ವಾಹನಗಳ ಸುಗಮ ಸಂಚಾರ ಹಾಗೂ ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
Action taken to control traffic congestion at Shankaramatha Circle, Hole bus stand
