ಟ್ಯಾಂಕ್ ಮೊಹಲ್ಲಾದಲ್ಲಿ ಕೇಸರಿ ಪಡೆ ವತಿಯಿಂದ 25ನೇ ವರ್ಷದ ಅದ್ದೂರಿ ಗಣೇಶೋತ್ಸವ-25th Annual Grand Ganesh Festival by Kesari Pade in Tank Mohalla

 SUDDILIVE || SHIVAMOGGA

ಟ್ಯಾಂಕ್ ಮೊಹಲ್ಲಾದಲ್ಲಿ ಕೇಸರಿ ಪಡೆ ವತಿಯಿಂದ 25ನೇ ವರ್ಷದ ಅದ್ದೂರಿ ಗಣೇಶೋತ್ಸವ-25th Annual Grand Ganesh Festival by Kesari Pade in Tank Mohalla  
Tankmohalla, ganeshotsava


ಶಿವಮೊಗ್ಗ:
ನಗರದ ಟ್ಯಾಂಕ್ ಮೊಹಲ್ಲಾ ಮುಖ್ಯ ರಸ್ತೆಯಲ್ಲಿ ಕೇಸರಿ ಪಡೆ ವತಿಯಿಂದ 25ನೇ ವರ್ಷದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಗಣೇಶೋತ್ಸವದ ಅಂಗವಾಗಿ ಸೆಪ್ಟೆಂಬರ್ 22ರಂದು ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುವಂತೆ ಕೇಸರಿ ಪಡೆ ಸಮಿತಿ ಮನವಿ ಮಾಡಿದೆ.

ಸೆಪ್ಟೆಂಬರ್ 23ರ ಸಂಜೆ ರಾಜಬೀದಿ ಉತ್ಸವ ನಡೆಯಲಿದ್ದು, ಡೊಳ್ಳು ಕುಣಿತ, ಸ್ಟ್ಯಾಂಡಿಂಗ್ ಡಿಜೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಉತ್ಸವದ ಪ್ರಮುಖ ಆಕರ್ಷಣೆಯಾಗಲಿವೆ. ಈ ಸಂದರ್ಭದಲ್ಲಿ ಗಣಪತಿ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲು ಸಿದ್ಧತೆ ನಡೆಸಲಾಗಿದೆ.

ಕೇಸರಿ ಅಲಂಕಾರದಿಂದ ಕಂಗೊಳಿಸುತ್ತಿರುವ ಟ್ಯಾಂಕ್ ಮೊಹಲ್ಲಾ

25ನೇ ವರ್ಷದ ಗಣೇಶೋತ್ಸವದ ಹಿನ್ನೆಲೆಯಲ್ಲಿ ಟ್ಯಾಂಕ್ ಮೊಹಲ್ಲಾ ಮುಖ್ಯ ರಸ್ತೆಯಲ್ಲಿ ವಿಶೇಷ ವಿದ್ಯುತ್ ಹಾಗೂ ಕೇಸರಿ ಬಣ್ಣದ ಅಲಂಕಾರ ಮಾಡಲಾಗಿದೆ. ರಸ್ತೆಯ ಮಧ್ಯಭಾಗದಲ್ಲಿ ಅಳವಡಿಸಿರುವ ‘ಜೈ ಶ್ರೀ ರಾಮ್’ ವಿದ್ಯುತ್ ನಾಮಫಲಕಗಳು ಸೇರಿದಂತೆ ವಿವಿಧ ಅಲಂಕಾರಗಳು ಗಮನ ಸೆಳೆಯುತ್ತಿವೆ.

ಗಣೇಶೋತ್ಸವದ ಅಂಗವಾಗಿ ಪ್ರತಿದಿನ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ರಂಗೋಲಿ ಸ್ಪರ್ಧೆ, ಆಟೋಟಗಳು ಸೇರಿದಂತೆ ಹಲವು ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆಯುತ್ತಿವೆ.

25ನೇ ವರ್ಷದ ಗಣೇಶೋತ್ಸವವನ್ನು ಯಶಸ್ವಿಯಾಗಿ ಆಚರಿಸಲು ಕೇಸರಿ ಪಡೆ ಸಮಿತಿ ಸಿದ್ಧತೆ ಮಾಡಿಕೊಂಡಿದ್ದು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಮನವಿ ಮಾಡಿದೆ.

25th Annual Grand Ganesh Festival by Kesari Pade in Tank Mohalla  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close