ಶಾಸಕರನ್ನು ತಲೆ ಮೇಲೆ ಹೊತ್ತು ಕುಣಿದ ಟ್ರಾಫಿಕ್ ಪೊಲೀಸರು; ವಿಡಿಯೋ ವೈರಲ್- Traffic cops carry MLA on their heads; video goes viral- Traffic cops carry MLA on their heads; video goes viral

 SUDDILIVE || SHIVAMOGGA

ಶಾಸಕರನ್ನು ತಲೆ ಮೇಲೆ ಹೊತ್ತು ಕುಣಿದ ಟ್ರಾಫಿಕ್ ಪೊಲೀಸರು; ವಿಡಿಯೋ ವೈರಲ್- Traffic cops carry MLA on their heads; video goes viral- Traffic cops carry MLA on their heads; video goes viral   
Traffic, police


ಶಿವಮೊಗ್ಗ:
ನಗರದ ಕೋಟೆ ದುರ್ಗಾಂಬ ದೇವಸ್ಥಾನದ ಎದುರು ಇರುವ ಪೂರ್ವ ಸಂಚಾರಿ ಪೊಲೀಸ್ ಠಾಣೆ ಆವರಣದಲ್ಲಿ ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರನ್ನು ಇಬ್ಬರು ಟ್ರಾಫಿಕ್ ಪೊಲೀಸರು ತಲೆ ಮೇಲೆ ಹೊತ್ತು ಮೆರವಣಿಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.

ನಿನ್ನೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೆರವಣಿಗೆ ನಡೆಯುತ್ತಿತ್ತು. ಗಣಪತಿ ಮೂರ್ತಿಯನ್ನು ಭೀಮನ ಮಡಿಲಿನಲ್ಲಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಶಾಸಕ ಚೆನ್ನಬಸಪ್ಪ ಸ್ಥಳಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ.

ಈ ವೇಳೆ ಉತ್ಸಾಹದಲ್ಲಿದ್ದ ಇಬ್ಬರು ಟ್ರಾಫಿಕ್ ಪೊಲೀಸರು ಶಾಸಕರನ್ನು ತಲೆ ಮೇಲೆ ಹೊತ್ತುಕೊಂಡು ಕೆಲಕಾಲ ಮೆರವಣಿಗೆ ನಡೆಸಿದ್ದು, ಸಂಭ್ರಮದಿಂದ ಕುಣಿದಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದವರು ವಿಡಿಯೋ ಮಾಡಿಕೊಂಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಶಾಸಕರನ್ನು ಪೊಲೀಸರು ಈ ರೀತಿಯಾಗಿ ತಲೆ ಮೇಲೆ ಹೊತ್ತು ಮೆರವಣಿಗೆ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ವಿವಿಧ ಚರ್ಚೆಗಳಿಗೆ ಕಾರಣವಾಗಿದೆ. ಕರ್ತವ್ಯದಲ್ಲಿದ್ದ ಪೊಲೀಸರು ಈ ರೀತಿಯಾಗಿ ವರ್ತಿಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Traffic cops carry MLA on their heads; video goes viral- Traffic cops carry MLA on their heads; video goes viral   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close