SUDDILIVE || SHIVAMOGGA
7 ವರ್ಷದ ಬಾಲಕನಿಗೆ ಡಿಕ್ಕಿ: ಚಿಕಿತ್ಸೆ ಫಲಿಸದೆ ಸಾವು- 7-year-old boy hit by car: dies without treatment
ಶಿವಮೊಗ್ಗ/ಸಾಗರ: ಗೂಡ್ಸ್ ಆಟೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ದಾಸಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ದಾಸಕೊಪ್ಪ ಗ್ರಾಮದ ಪ್ರಶಾಂತ್ ಅವರ ಪುತ್ರ ತನ್ಮಯ್ ಎಂದು ಗುರುತಿಸಲಾಗಿದೆ.
ಸೆಪ್ಟೆಂಬರ್ 27ರ ಸಂಜೆ ದಾಸಕೊಪ್ಪ ಗ್ರಾಮದ ಪಾಂಡುರಂಗ ದೇವಸ್ಥಾನದ ಬಳಿ ರಸ್ತೆ ಬದಿ ನಿಂತಿದ್ದ ತನ್ಮಯ್‌ಗೆ ಗೂಡ್ಸ್ ಆಟೋ ಡಿಕ್ಕಿಯಾಗಿದೆ. ಆಟೋದ ಗ್ರಿಲ್ ಬಾಲಕನ ತಲೆಗೆ ಬಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾನೆ.
ಕೂಡಲೇ ಬಾಲಕನನ್ನು ಆನಂದಪುರದ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ತನ್ಮಯ್ ಮೃತಪಟ್ಟಿದ್ದಾನೆ.
ಘಟನೆ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
- 7-year-old boy hit by car: dies without treatment
