ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

SUDDILIVE || SHIVAMOGGA

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

Madhusudhan, suda


ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (SUDA) ನೂತನ ಅಧ್ಯಕ್ಷರಾಗಿ ಕುವೆಂಪು ನಗರದ ನಿವಾಸಿ ಸಿ.ಜಿ. ಮಧುಸೂದನ್ (ಬಿನ್ ಸಿ. ಗಂಗಾಧರಪ್ಪ) ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3) ಹಾಗೂ ಕಲಂ 3(4) ರಡಿಯಲ್ಲಿ ನೀಡಲಾಗಿರುವ ಅಧಿಕಾರವನ್ನು ಚಲಾಯಿಸಿ, ನಗರಾಭಿವೃದ್ಧಿ ಇಲಾಖೆಯು ಈ ನಾಮನಿರ್ದೇಶನ ಮಾಡಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಸಿ.ಜಿ. ಮಧುಸೂದನ್ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಅಕ್ಟೋಬರ್ 1, 2026 ರಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close