ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾನ್ವಾಯ್ ತಡೆದು ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು- Protest by stopping Union Minister V. Somanna's convoy in Shivamogga: FIR registered against Youth Congress workers

SUDDILIVE || SHIVAMOGGA

ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾನ್ವಾಯ್ ತಡೆದು ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು- Protest by stopping Union Minister V. Somanna's convoy in Shivamogga: FIR registered against Youth Congress workers  
Protest, stopping




ಶಿವಮೊಗ್ಗ
—SIR ವಿರೋಧಿಸಿ ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯಲ್ಲಿ ಸೋಮವಾರ, ಅಕ್ಟೋಬರ್ 12, 2026 ರಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಕಾನ್ವಾಯ್ ಅನ್ನು ವಾಹನವನ್ನ ತಡೆದು ಕಪ್ಪು ಬಟ್ಟೆ ಪ್ರದರ್ಶಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ನಗರದ ಪಾರೇಖಾ ವಿನಾಯಕ ಮಾಲ್‌ನಲ್ಲಿರುವ ಬಿ.ಎಸ್. ಚನ್ನಬಸಪ್ಪ ಅಂಡ್ ಸನ್ಸ್ ಬಟ್ಟೆ ಅಂಗಡಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ಸಚಿವರು ಆಗಮಿಸುತ್ತಿದ್ದ ವೇಳೆ, ಬೆಳಿಗ್ಗೆ 11:00 ಗಂಟೆ ಸುಮಾರಿಗೆ ಸತೀಶ್ ಟ್ರಾವೆಲ್ಸ್ ಮುಂಭಾಗ ಈ ಘಟನೆ ನಡೆದಿದೆ. ಚರಣ್ ಬೊಮ್ಮನಕಟ್ಟೆ, ಗಿರೀಶ್, ಬಾಲಾಜಿ ಸೇರಿದಂತೆ ಸುಮಾರು 18 ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಇತರೆ 5-6 ಜನ ಗುಂಪು ಸೇರಿ, ಕಾನೂನುಬಹಿರವಾಗಿ ಸಚಿವರ ಕಾರಿಗೆ ಅಡ್ಡಬಂದು ದಿಕ್ಕಾರ ಕೂಗಿ ಸಾರ್ವಜನಿಕ ಶಾಂತಿಭಂಗ ಉಂಟುಮಾಡಿದ್ದಾರೆ ಎಂದು ದೊಡ್ಡಪೇಟೆ ಪೊಲೀಸ್ ಠಾಣೆಯ ಎಎಸ್‌ಐ ಸೈಯದ್ ಇಮ್ರಾನ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಸ್ಥಳದಲ್ಲಿದ್ದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಕೂಡಲೇ ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ಪಕ್ಕಕ್ಕೆ ಸರಿಸಿ ಸಚಿವರ ಕಾರಿಗೆ ದಾರಿ ಮಾಡಿಕೊಟ್ಟಿದ್ದಾರೆ.

ಜೊತೆಗೆ, ಗಣ್ಯ ವ್ಯಕ್ತಿಗಳ ಭೇಟಿಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಯಾವುದೇ ಮುನ್ಸೂಚನೆ ನೀಡದೆ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಪಾರೇಖಾ ವಿನಾಯಕ ಮಾಲ್‌ನ ಬಟ್ಟೆ ಅಂಗಡಿಯ ವ್ಯವಸ್ಥಾಪಕರ (ಮ್ಯಾನೇಜರ್) ವಿರುದ್ಧವೂ ದೂರಿನಲ್ಲಿ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Protest by stopping Union Minister V. Somanna's convoy in Shivamogga: FIR registered against Youth Congress workers

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close