SUDDILIVE || SHIVAMOGGA
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು, ₹50 ಸಾವಿರ ದಂಡ-Sexual harassment of minor girl: Accused gets 3 years in jail, ₹50,000 fine
ಶಿವಮೊಗ್ಗ: 13 ವರ್ಷದ ಮಾನಸಿಕ ಅಸ್ವಸ್ಥ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 27 ವರ್ಷದ ಆರೋಪಿಗೆ ನ್ಯಾಯಾಲಯವು ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿದೆ. ಅಲ್ಲದೆ, ಸಂತ್ರಸ್ತ ಬಾಲಕಿಗೆ ₹40 ಸಾವಿರ ಪರಿಹಾರ ನೀಡುವಂತೆ ಆದೇಶಿಸಿದೆ.
ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪಿಎಸ್ಐ ರಾಜುರೆಡ್ಡಿ ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್ಟಿಎಸ್ಸಿ-1) ಮುಂದೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಆರೋಪಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಜೊತೆಗೆ ಸಂತ್ರಸ್ತ ಬಾಲಕಿಗೆ ₹40,000 ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.
Sexual harassment of minor girl: Accused gets 3 years in jail, ₹50,000 fine
