SUDDILIVE || HANAGEREKATTE
ಹಣಗೆರೆ ಕಟ್ಟೆ ಬಳಿ ಟಾಟಾ ಏಸ್ ವಾಹನ ಪಲ್ಟಿ; 8 ಮಂದಿಗೆ ಗಾಯ- Tata Ace vehicle overturns near Anigere Katte; 8 injured
ಶಿವಮೊಗ್ಗ: ಆಯನೂರು ಕಡೆಯಿಂದ ಶಿವಮೊಗ್ಗದತ್ತ ಬರುತ್ತಿದ್ದ ಟಾಟಾ ಏಸ್ ವಾಹನವು ಹಣಗೆರೆ ಕಟ್ಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಸುಮಾರು 8 ಮಂದಿ ಗಾಯಗೊಂಡಿದ್ದು, ಗಾಯಾಳುಗಳಲ್ಲಿ 6 ಜನರನ್ನ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಆನೂರು ಕಡೆಯಿಂದ ಅಣಿಗೆರೆ ಕಟ್ಟೆ ಮಾರ್ಗವಾಗಿ ಶಿವಮೊಗ್ಗದತ್ತ ಬರುತ್ತಿದ್ದ ಟಾಟಾ ಏಸ್ ವಾಹನವು ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ವಾಹನದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ತಕ್ಷಣವೇ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ.
ಅಪಘಾತದಲ್ಲಿ ಏಳು ಅಥವಾ ಎಂಟು ಮಂದಿ ಗಾಯಗೊಂಡಿರುವ ಸಾಧ್ಯತೆಯಿದ್ದು, ಅವರಲ್ಲಿ 6 ಜನರನ್ನ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳು ಯಾವ ಊರಿನವರು ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆದರೂ ಗಾಯಾಳುಗಳು ದಾವಣಗೆರೆ ಜಿಲ್ಲೆಯ ಜರೆಕಟ್ಟೆಯ ನಿವಾಸಿಗಳು ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಳೂರು ಪೊಲೀಸರು ಮತ್ತು ಸಿಬ್ಬಂದಿ ತೆರಳಿದ್ದಾರೆ. ಗಾಯಾಳುಗಳಿಗೆ ಸ್ಥಳೀಯರೆ ಅಂಬ್ಯೂಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ ಎನ್ನಲಾಗಿದೆ.
Tata Ace vehicle overturns near Anigere Katte; 8 injured
