ಕಾಂಗ್ರೆಸ್‌ಗೆ ದುರ್ಗತಿ ಬಂದಿದೆ, ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದೆ: ಆರಗ ಜ್ಞಾನೇಂದ್ರ-Congress is in trouble, it is trying to create anarchy in the country: Araga Gyanendra

 SUDDILIVE || SHIVAMOGGA

ಕಾಂಗ್ರೆಸ್‌ಗೆ ದುರ್ಗತಿ ಬಂದಿದೆ, ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದೆ: ಆರಗ ಜ್ಞಾನೇಂದ್ರ-Congress is in trouble, it is trying to create anarchy in the country: Araga Gyanendra    
Araga, jnanendra


ಹೊಸನಗರ:
ಕಾಂಗ್ರೆಸ್ ಪಕ್ಷ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದೆ. 125 ವರ್ಷಗಳ ಇತಿಹಾಸವಿರುವ ಪಕ್ಷಕ್ಕೆ ಇಂತಹ ದುರ್ಗತಿ ಬಂದಿರುವುದು ದುರದೃಷ್ಟಕರ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದರು.

ಬಿಜೆಪಿಯ ಸೇವಾ ಸಂಕಲ್ಪ ಅಭಿಯಾನ-2026ರ ಅಂಗವಾಗಿ ಹೊಸನಗರದ ಬಸ್ ನಿಲ್ದಾಣದ ಆವರಣದಲ್ಲಿ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಿದ್ದ ಮ್ಯಾರಥಾನ್ ಮತ್ತು ವಾಕಥಾನ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಟೀಕಿಸಿದ ಅವರು, ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋದವರಿಗೆ ಅರ್ಜಿ ಸಲ್ಲಿಸಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಲು ಅವಕಾಶವಿದೆ. ಮತದಾರರ ಪಟ್ಟಿಯಲ್ಲಿ ಅನುಮಾನಾಸ್ಪದ ಹೆಸರುಗಳಿದ್ದರೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುವಾಗ ಅದನ್ನೇ ವಿವಾದವನ್ನಾಗಿ ಮಾಡುವುದು ಸರಿಯಲ್ಲ ಎಂದರು.

ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕೆಂಬ ಕಾಂಗ್ರೆಸ್ ನಿಲುವನ್ನೂ ಅವರು ಟೀಕಿಸಿದರು. ಹಿಂದಿನ ಚುನಾವಣೆಗಳಲ್ಲಿ ತೋಳ್ಬಲದ ಮೂಲಕ ಮತಗಳನ್ನು ಪಡೆದು ಅಧಿಕಾರ ನಡೆಸಿದ ಕಾಂಗ್ರೆಸ್‌ಗೆ ಈಗ ಬ್ಯಾಲೆಟ್ ಪೇಪರ್ ನೆನಪಾಗಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಯ ಸೈದ್ಧಾಂತಿಕ ನಿಲುವುಗಳನ್ನು ಪ್ರಸ್ತಾಪಿಸಿದ ಆರಗ ಜ್ಞಾನೇಂದ್ರ, ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ದೇಶದ ಭದ್ರತೆಯನ್ನು ಬಲಪಡಿಸುವುದು ಬಿಜೆಪಿಯ ಪ್ರಮುಖ ಅಜೆಂಡಾಗಳಾಗಿದ್ದವು ಎಂದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ 370ನೇ ವಿಧಿ ರದ್ದುಗೊಳಿಸಿ ಜಮ್ಮು-ಕಾಶ್ಮೀರದ ಏಕೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ 26 ಮಂದಿ ಮೃತಪಟ್ಟ ಘಟನೆ ಹಾಗೂ ಅದರ ನಂತರದ ಭಾರತದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ಅವರು, ದೇಶದ ಭದ್ರತೆ ಮತ್ತು ಭಾರತೀಯ ಮಹಿಳೆಯರ ಸಿಂಧೂರದ ಮಹತ್ವವನ್ನು ಜಗತ್ತಿಗೆ ತೋರಿಸಿಕೊಡಲಾಗಿದೆ ಎಂದು ಹೇಳಿದರು.

ರೈತರ ಬೆಳೆ ವಿಮೆ, ಬಡವರ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಭಾರತ್ ಯೋಜನೆಯಡಿ ಐದು ಲಕ್ಷ ರೂಪಾಯಿವರೆಗೆ ಆರೋಗ್ಯ ವಿಮೆ, ರೈಲ್ವೆ ಅಭಿವೃದ್ಧಿ, ವಿಮಾನ ನಿಲ್ದಾಣಗಳ ವಿಸ್ತರಣೆ ಹಾಗೂ ರಕ್ಷಣಾ ಕ್ಷೇತ್ರದಲ್ಲಿ ಆಧುನಿಕ ಶಸ್ತ್ರಾಸ್ತ್ರಗಳ ಬಳಕೆಯಂತಹ ಕ್ರಮಗಳನ್ನು ಪ್ರಸ್ತಾಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಅಭಿವೃದ್ಧಿಗೆ ಹೊಸ ವೇಗ ದೊರೆತಿದೆ ಎಂದು ಅಭಿಪ್ರಾಯಪಟ್ಟರು.

ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿರುವುದು ದೇಶದ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಜನರಿಗೆ ತಿಳಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

Congress is in trouble, it is trying to create anarchy in the country: Araga Gyanendra    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close