SUDDILIVE || SHIVAMOGGA
ಗೋಡ್ಸೆಯನ್ನು ದೇಶದ ಮೊದಲ ಭಯೋತ್ಪಾದಕ ಎಂದು ಬಿಜೆಪಿ ಘೋಷಿಸಲಿ: ಬಿ.ಕೆ. ಹರಿಪ್ರಸಾದ್-BJP should declare Godse as country's first terrorist: B.K. Hariprasad
ಶಿವಮೊಗ್ಗ: ನಾಥೂರಾಮ್ ಗೋಡ್ಸೆಯನ್ನು ದೇಶದ ಮೊದಲ ಭಯೋತ್ಪಾದಕ ಎಂದು ಭಾರತೀಯ ಜನತಾ ಪಕ್ಷ ಘೋಷಿಸಬೇಕು. ನಿಜವಾಗಿಯೂ ದೇಶಭಕ್ತಿ ಮತ್ತು ಸ್ವಾತಂತ್ರ್ಯ ಹೋರಾಟದ ಬಗ್ಗೆ ನಂಬಿಕೆ ಇದ್ದರೆ ಈ ಘೋಷಣೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸವಾಲು ಹಾಕಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಹೆಸರನ್ನು ಅಳಿಸಿಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಗಾಂಧೀಜಿಯವರ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಉಗ್ರವಾದಿ ಹಾಗೂ ಭಯೋತ್ಪಾದಕ ಎಂದು ಬಿಜೆಪಿ ಘೋಷಿಸಬೇಕು ಎಂದು ಆಗ್ರಹಿಸಿದರು.
ಪಕ್ಷದಲ್ಲಿ ಶಿಸ್ತು ಉಲ್ಲಂಘಿಸಿದರೆ ಕ್ರಮ
ಕಾಂಗ್ರೆಸ್‌ನಲ್ಲಿ ಸ್ಟಿಂಗ್ ಆಪರೇಷನ್ ನ ಸೆಲ್‌ಗಳಿಲ್ಲ. ಇಂತಹ ಚಟುವಟಿಕೆಗಳಲ್ಲಿ ಪಕ್ಷದ ಯಾರಾದರೂ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳೊಂದಿಗೆ ಸಾಬೀತಾದರೆ, ಅವರು ಎಷ್ಟೇ ದೊಡ್ಡವರಾಗಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹರಿಪ್ರಸಾದ್ ಹೇಳಿದರು.
ಪಕ್ಷದೊಳಗಿನ ಕೆಲವರ ವಿರುದ್ಧದ ಆರೋಪಗಳ ಕುರಿತು ಮಾತನಾಡಿದ ಅವರು, ಶಿಸ್ತು ಸಮಿತಿಯ ಅಧ್ಯಕ್ಷ ರೆಹಮಾನ್ ಖಾನ್ ಅವರಿಗೆ ವಿಷಯ ತಿಳಿಸಿದ್ದು, ಸಂಬಂಧಪಟ್ಟವರಿಗೆ ಶೋಕಾಸ್ ನೋಟಿಸ್ ನೀಡುವಂತೆ ಸೂಚಿಸಲಾಗಿದೆ ಎಂದರು.
ಕ್ಯಾಬಿನೆಟ್‌ನಲ್ಲಿ ಏನು ಚರ್ಚೆಯಾಗಿದೆ ಎಂಬುದು ತಮಗೆ ತಿಳಿದಿಲ್ಲ. ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳಿಗೆ ಆಧಾರವಾಗಿ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಆರೋಪಗಳ ತನಿಖೆ ನಡೆಯಲಿ; ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗಾಂಧೀಜಿಯವರ ಸ್ಮರಣೆಗೆ ಕಾರ್ಯಕ್ರಮ
ಶಿವಮೊಗ್ಗ ಜಿಲ್ಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಭೇಟಿ ನೀಡಿದ ಸ್ಥಳಗಳು ಹಾಗೂ ಅವರ ನೆನಪನ್ನು ಉಳಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ವಿಧಾನ ಪರಿಷತ್ತಿನ ಸದಸ್ಯರ ನಿಧಿ ಸೇರಿದಂತೆ ಅಗತ್ಯ ನೆರವು ನೀಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಹೇಳಿದರು.
ಶಿವಮೊಗ್ಗ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳು ರೈತ ಹೋರಾಟಗಳು, ಕಾಗೋಡು ಚಳವಳಿ ಹಾಗೂ ಸ್ವಾತಂತ್ರ್ಯ ಹೋರಾಟದಂತಹ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿವೆ. ಈ ಹೋರಾಟಗಳಲ್ಲಿ ತ್ಯಾಗ ಮಾಡಿದವರ ನೆನಪನ್ನು ಉಳಿಸುವ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.
ವಿಧಾನ ಪರಿಷತ್ ಚುನಾವಣೆ ಕುರಿತು ವಿಶ್ವಾಸ
ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.
‘ವೋಟ್ ಚೋರ್, ದೇಶ್ ಚೋರ್’ ಅಭಿಯಾನದ ಭಾಗವಾಗಿ ಮತವನ್ನು ಉಳಿಸಿ ದೇಶವನ್ನು ರಕ್ಷಿಸುವ ಉದ್ದೇಶದೊಂದಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯಿಂದ ವೀಕ್ಷಕರು ಆಗಮಿಸಿದ್ದು, ಅಭಿಯಾನ ಮುಂದುವರಿಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ನಾಯಕ ನಾಸಿರ್ ಹುಸೇನ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಒಂದು ವಾರದಲ್ಲಿ ನಿಗಮ ಮಂಡಳಿಭರ್ತಿ
ವಿಧಾನ ಪರಿಷತ್ ಚುನಾವಣೆಗಾಗಿ ನಿಗಮ ಮಂಡಳಿಯಲ್ಲಿರುವ ಹಳೆಯವರನ್ನ ತೆಗೆದು ಹೊಸಬರನ್ನ ತರುವುದಾಗಿ ಭರವಸೆ ನೀಡಿದ ಹರಿಪ್ರಸಾದ್ ಒಂದು ವಾರದಲ್ಲಿ ಈ ಕ್ರಮ ಆಗಲಿದೆ ಎಂದು
