ಭದ್ರಾವತಿ ವಿಐಎಸ್ಎಲ್ ಎಜಿಎಂ ಗೋವಿಂದರಾಜು ಆತ್ಮ*ಹತ್ಯೆ-Bhadravati VISL AGM Govindaraju commits suicide

 SUDDILIVE || BHADRAVATHI

ಭದ್ರಾವತಿ ವಿಐಎಸ್ಎಲ್ ಎಜಿಎಂ ಗೋವಿಂದರಾಜು ಆತ್ಮ*ಹತ್ಯೆ-Bhadravati VISL AGM Govindaraju commits suicide 



ಭದ್ರಾವತಿ:
ವಿಐಎಸ್ಎಲ್ ಕಾರ್ಖಾನೆಯಲ್ಲಿ ಎಜಿಎಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋವಿಂದರಾಜು (52) ಅವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.

ಸೇಲಂ ಮೂಲದ ಗೋವಿಂದರಾಜು ಅವರು ಕಳೆದ 16ರಿಂದ 17ವರ್ಷಗಳಿಂದ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯಲ್ಲಿ ಎಜಿಎಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಪತ್ನಿಯನ್ನು ರೈಲಿಗೆ ಕಳುಹಿಸಿದ್ದ ಗೋವಿಂದರಾಜು ಬಳಿಕ ಮನೆಗೆ ವಾಪಸ್ಸಾಗಿದ್ದರು. ಸೋಮವಾರ ಬೆಳಗ್ಗೆ ಸುಮಾರು 8 ಗಂಟೆಗೆ ತಮ್ಮ ಸ್ನೇಹಿತರಿಗೆ ಸಂದೇಶವನ್ನೂ ಕಳುಹಿಸಿದ್ದರು ಎನ್ನಲಾಗಿದೆ.

ನಂತರ ಕಾರ್ಖಾನೆಗೆ ತೆರಳಿ ಕೆಲವು ಕಡತಗಳಿಗೆ ಸಹಿ ಹಾಕಬೇಕಿದ್ದ ಅವರು ಕೆಲಸಕ್ಕೆ ಹಾಜರಾಗಿರಲಿಲ್ಲ. ಇದರಿಂದ ಅನುಮಾನಗೊಂಡ ಕಾರ್ಖಾನೆಯ ಅಧಿಕಾರಿಗಳು ಹಲವು ಬಾರಿ ಅವರಿಗೆ ಕರೆ ಮಾಡಿದ್ದು, ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳು ಆತಂಕಗೊಂಡಿದ್ದರು.

ಇದೇ ವೇಳೆ ವಿದ್ಯುತ್ ಮೀಟರ್ ರೀಡರ್ ಸಿಬ್ವಂದಿ ಕೂಡ ಅವರ ಮನೆಗೆ ತೆರಳಿ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಬಳಿಕ ಕಾರ್ಖಾನೆಯ ಅಧಿಕಾರಿಗಳು ಮನೆಗೆ ತೆರಳಿ ಪರಿಶೀಲಿಸಿದಾಗ ಗೋವಿಂದರಾಜು ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ನ್ಯೂಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Bhadravati VISL AGM Govindaraju commits suicide   


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close