ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ಮಹಿಳಾ ಮೋರ್ಚಾ; ಡ್ರಾಮಾ, ಹೈಡ್ರಾಮಾ! BJP Mahila Morcha sets out to lay siege to Shimoga District Congress office; Drama, hydra drama!

 SUDDILIVE || SHIVAMOGGA

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ಮಹಿಳಾ ಮೋರ್ಚಾ; ಡ್ರಾಮಾ, ಹೈಡ್ರಾಮಾ! BJP Mahila Morcha sets out to lay siege to Shimoga District Congress office; Drama, hydra drama!   

Bjp, dram

Bjp, drama

Bjp, drama


ಶಿವಮೊಗ್ಗ:
ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ವೇಳೆ ಡ್ರಾಮಾ, ಹೈಡ್ರಾಮಾ ನಡೆದ ಘಟನೆ ನಗರದ ಗೋಪಿ ವೃತ್ತದಲ್ಲಿ ಗಮನ ಸೆಳೆಯಿತು.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಖಂಡಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಪ್ರತಿಭಟನಾಕಾರರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿಗೆ ತೆರಳುವ ಮಾರ್ಗದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಇಲಾಖೆಯ ವಾಹನಗಳನ್ನು ಅಡ್ಡವಾಗಿ ನಿಲ್ಲಿಸಿ ಪ್ರತಿಭಟನಾಕಾರರನ್ನು ತಡೆಯಲು ಮುಂದಾದರು. ಆದರೆ, ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪೊಲೀಸ್ ವಾಹನಗಳು ಹಾಗೂ ಬ್ಯಾರಿಕೇಡ್‌ಗಳನ್ನು ದಾಟಿ ಮುಂದೆ ಸಾಗಲು ಯತ್ನಿಸಿದರು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆಯಲು ಮುಂದಾದರು. ಮಹಿಳಾ ಕಾರ್ಯಕರ್ತೆಯರನ್ನು ಪೊಲೀಸ್ ವಾಹನಗಳಲ್ಲಿ ಕೂರಿಸುವ ಸಂದರ್ಭದಲ್ಲಿ ಗದ್ದಲ, ಮಾತಿನ ಚಕಮಕಿ ಹಾಗೂ ಹೈಡ್ರಾಮಾ ನಡೆಯಿತು. ಕೆಲವರು ಅಸ್ವಸ್ಥರಾದಂತೆ ಕಂಡುಬಂದರೆ, ಇನ್ನು ಕೆಲವರನ್ನು ವಾಹನಕ್ಕೆ ಕೂರಿಸಲು ಮಹಿಳಾ ಪೊಲೀಸರು ಹರಸಾಹಸ ಪಡಬೇಕಾಯಿತ

Bjp, drama



Bjp, drama

ಸ್ಥಳದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರ್ಯಪ್ಪ ಅವರ ನಡುವೆ ಏರುಧ್ವನಿಯಲ್ಲಿ ಮಾತುಕತೆ ನಡೆಯಿತು. ಮಾಜಿ ಉಪಮೇಯರ್ ಸುರೇಖಾ ಮುರುಳೀಧರ್ ಅವರ ಪ್ರತಿಭಟನಾ ಆಕ್ರೋಶವೂ ಗಮನ ಸೆಳೆಯಿತು.

ಒಟ್ಟಿನಲ್ಲಿ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ಪೊಲೀಸ್ ತಡೆಯಾಟ, ಕಾರ್ಯಕರ್ತೆಯರನ್ನು ವಶಕ್ಕೆ ಪಡೆಯುವ ಪ್ರಕ್ರಿಯೆ ಹಾಗೂ ಮುಖಂಡರ ನಡುವಿನ ಮಾತಿನ ಚಕಮಕಿ ಹಿನ್ನೆಲೆಯಲ್ಲಿ ಡ್ರಾಮಾ, ಹೈಡ್ರಾಮಾಕ್ಕೆ ಸಾಕ್ಷಿಯಾಯಿತು.

BJP Mahila Morcha sets out to lay siege to Shimoga District Congress office; Drama, hydra drama! 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close