ತೂಬನ್ನೇ ಕಿತ್ತುಹಾಕಿ ಕೆರೆ ಒತ್ತುವರಿ ಆರೋಪ; 7 ದಿನದಲ್ಲಿ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ- Accusations of encroaching on the lake by tearing down the well; Minister Khandre orders action within 7 days

SUDDILIVE || SAGARA

ತೂಬನ್ನೇ ಕಿತ್ತುಹಾಕಿ ಕೆರೆ ಒತ್ತುವರಿ ಆರೋಪ; 7 ದಿನದಲ್ಲಿ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ- Accusations of encroaching on the lake by tearing down the well; Minister Khandre orders action within 7 days   

Lake, enchrochment

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆನಂದಪುರ ಹೋಬಳಿಯ ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಸರ ಗ್ರಾಮದ ಸರ್ಕಾರಿ ಕೆರೆ ಒತ್ತುವರಿ ಮಾಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.

ಹೊನ್ನೆಸರ ಗ್ರಾಮದ ಸರ್ಕಾರಿ ಕೆರೆಯ ತೂಬನ್ನು ಕಿತ್ತುಹಾಕಿ, ವಿರೂಪಗೊಳಿಸಿ ಒತ್ತುವರಿ ಮಾಡಲಾಗಿದೆ ಎಂಬ ಮಾಹಿತಿ ಸಚಿವರ ಕಚೇರಿ ತಲುಪಿದ್ದು, ಈ ಹಿನ್ನೆಲೆಯಲ್ಲಿ ಸೆ.28ರಂದು ಸಚಿವರು ಟಿಪ್ಪಣಿ ಹೊರಡಿಸಿದ್ದಾರೆ.

ಕೆರೆ ಗ್ರಾಮ ಪಂಚಾಯಿತಿಗೆ ಸೇರಿದ್ದಲ್ಲಿ ಅಥವಾ ಗ್ರಾಮ ಪಂಚಾಯಿತಿ ನಿರ್ವಹಣೆ ಮಾಡುತ್ತಿದ್ದಲ್ಲಿ, ಒತ್ತುವರಿ ಆಗಿರುವುದು ನಿಜವೇ ಎಂಬುದನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ಒತ್ತುವರಿ ದೃಢಪಟ್ಟರೆ, ಕೆರೆಗಳ ಸಂರಕ್ಷಣೆ ಕುರಿತು ಉಚ್ಚ ನ್ಯಾಯಾಲಯದ ವಿವಿಧ ಪ್ರಕರಣಗಳಲ್ಲಿ ನೀಡಿರುವ ಆದೇಶಗಳು ಹಾಗೂ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ–2014ರ ಅನ್ವಯ ಒತ್ತುವರಿ ತೆರವುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ.

ಅಲ್ಲದೆ, ಕೆರೆಯನ್ನು ಸಂರಕ್ಷಿಸಲು ಅಗತ್ಯ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು 7 ದಿನಗಳೊಳಗಾಗಿ ತಮ್ಮ ಕಚೇರಿಗೆ ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ. ಈ ಕುರಿತು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ (CEO) ಸಹ ಪ್ರತಿಯನ್ನು ಕಳುಹಿಸಲಾಗಿದೆ.

Accusations of encroaching on the lake by tearing down the well; Minister Khandre orders action within 7 days   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close