SUDDILIVE || SHIVAMOGGA
ಹೊಸನಗರ: ಕೆರೆಗೆ ಕಾಲುಜಾರಿ ಬಿದ್ದು ವ್ಯಕ್ತಿ ಸಾ*ವು-Hosanagara: Man dies after slipping and falling into lake
ಶಿವಮೊಗ್ಗ: ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಲ ಗ್ರಾಮದಲ್ಲಿ ಪಂಪ್‌ಸೆಟ್‌ನ ಫುಟ್‌ವಾಲ್ವ್‌ಗೆ ನೀರು ತುಂಬಲು ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಈ ದುರಂತ ಸಂಭವಿಸಿದೆ.
ಮುತ್ತಲ ಗ್ರಾಮದ ರಮೇಶ್ ಅವರು ಭಾನುವಾರ ಸಂಜೆ ಸುಮಾರು 5 ಗಂಟೆಯ ವೇಳೆಗೆ ಪಂಪ್‌ಸೆಟ್‌ನ ಫುಟ್‌ವಾಲ್ವ್‌ಗೆ ನೀರು ತುಂಬಲು ತೆರಳಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯನ್ನು ಗಮನಿಸಿದ ಮನೆಯವರು ತಕ್ಷಣವೇ ರಮೇಶ್ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಹೊಸನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅವರನ್ನು ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ರಮೇಶ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
