ಟಯರ್ ಸ್ಫೋಟಗೊಂಡರೂ ಬಸ್ ಮಗುಚದಂತೆ ನಿಯಂತ್ರಿಸಿದ ಚಾಲಕ: ತಪ್ಪಿದ ಭಾರಿ ಅನಾಹುತ- Driver manages to keep bus from overturning despite tire blowout: Major disaster averted

 SUDDILIVE || SHIVAMOGGA

ಟಯರ್ ಸ್ಫೋಟಗೊಂಡರೂ ಬಸ್ ಮಗುಚದಂತೆ ನಿಯಂತ್ರಿಸಿದ ಚಾಲಕ: ತಪ್ಪಿದ ಭಾರಿ ಅನಾಹುತ- Driver manages to keep bus from overturning despite tire blowout: Major disaster averted   
Bus, tyre

ಶಿವಮೊಗ್ಗ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗದ ಟಯರ್ ಸ್ಫೋಟಗೊಂಡು ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ ನಡೆದಿದೆ. ಚಾಲಕನ ಸಮಯಪ್ರಜ್ಞೆ ಮತ್ತು ಜಾಣ್ಮೆಯಿಂದ ಬಸ್ ಮಗುಚಿ ಬೀಳುವುದನ್ನು ತಪ್ಪಿಸಿದ್ದು, ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಸುತ್ತುಕೋಟೆಯಿಂದ ಬೂದಿಗೆರೆ ಮಾರ್ಗವಾಗಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಎಂದಿನಂತೆ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಮಾರ್ಗಮಧ್ಯೆ ಕೊಮ್ಮನಾಳು ಬಳಿ ಬಸ್‌ನ ಮುಂಭಾಗದ ಟಯರ್ ಏಕಾಏಕಿ ಸ್ಫೋಟಗೊಂಡಿದೆ. ಇದರಿಂದ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದಿದೆ.

ಟಯರ್ ಸ್ಫೋಟಗೊಂಡ ತಕ್ಷಣ ಎಚ್ಚೆತ್ತುಕೊಂಡ ಚಾಲಕ, ಬಸ್ ರಸ್ತೆಗೆ ಮಗುಚಿ ಬೀಳದಂತೆ ಹಾಗೂ ಇತರ ವಾಹನಗಳಿಗೆ ಡಿಕ್ಕಿಯಾಗದಂತೆ ಸಮಯಪ್ರಜ್ಞೆ ಮೆರೆದು ಬಸ್‌ ಅನ್ನು ನಿಯಂತ್ರಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ ಪ್ರಯಾಣಿಕರಿಗೆ ನೆರವಾಗಿದ್ದಾರೆ. ಬಳಿಕ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಸ್ಥಳೀಯರ ಸಹಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಅಪಾಯದ ಸಂದರ್ಭದಲ್ಲಿ ಧೈರ್ಯದಿಂದ ಕಾರ್ಯನಿರ್ವಹಿಸಿ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿದ ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Driver manages to keep bus from overturning despite tire blowout: Major disaster averted

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close