SUDDILIVE || SAGARA
ಸಾಗರ: ಮನೆ ಮೇಲೆ ಪಲ್ಟಿಯಾದ ಖಾಸಗಿ ಬಸ್; ಗಾರ್ಮೆಂಟ್ಸ್ ನೌಕರರಿಗೆ ಗಾಯ-Sagara: Private bus overturns on house; Garment workers injured
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಕಲ್ಗಲ್-ಹಲಕೊಟ್ಟಿಗೆ ತಿರುವಿನ ಹೊಸಕೊಪ್ಪ ಕ್ರಾಸ್ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಕೊಲ್ಲೂರಿನಿಂದ ಸಿಗಂದೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಕಲ್ಗಲ್-ಹಲಕೊಟ್ಟಿಗೆ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆ ಮೇಲೆ ಬಿದ್ದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ದಾವಣಗೆರೆ ಮೂಲದ ಗಾರ್ಮೆಂಟ್ಸ್ ನೌಕರರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಗಾಯಾಳುಗಳನ್ನು ತಕ್ಷಣ ತುಮರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಅಪಘಾತದ ಮಾಹಿತಿ ತಿಳಿದು ಕಾರ್ಗಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣ ಹಾಗೂ ಗಾಯಾಳುಗಳ ಸಂಖ್ಯೆ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಿದೆ.
Sagara: Private bus overturns on house; Garment workers injured
