ಸಾಗರ ಉಪವಿಭಾಗೀಯ ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ. ನಾಗೇಂದ್ರಪ್ಪ ಎತ್ತಂಗಡಿ?- Dr. Nagendrappa, a gynecologist at Sagara Sub-Divisional Hospital, is transfered

SUDDILIVE || SHIVAMOGGA

ಸಾಗರ ಉಪವಿಭಾಗೀಯ ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ. ನಾಗೇಂದ್ರಪ್ಪ ಎತ್ತಂಗಡಿ?- Dr. Nagendrappa, a gynecologist at Sagara Sub-Divisional Hospital, is transfered  

Doctor, transfer


ಸಾಗರ / ಶಿವಮೊಗ್ಗ:
ಸಾಗರದ ಉಪವಿಭಾಗೀಯ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ನಾಗೇಂದ್ರಪ್ಪ ಎಂ.ಬಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರಸ್ತುತ ಕರ್ತವ್ಯದಿಂದ ಬಿಡುಗಡೆಗೊಳಿಸಿ, ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯಕ್ಕೆ ವರದಿ ಮಾಡಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಸಾಮಾಜಿಕ ಜಾಲತಾಣಗಳಲ್ಲಿ "ಇದು ಸಾಗರದ ವೈದ್ಯ ಡಾ. ನಾಗೇಂದ್ರಪ್ಪ ಎಡವಟ್ಟಿನ ಕಥೆ" ಎಂಬ ಶೀರ್ಷಿಕೆಯಡಿ ವಿಡಿಯೋ ವರದಿಯೊಂದು ಸಾರ್ವಜನಿಕರಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಜೊತೆಗೆ, ರೋಗಿಗಳಿಗೆ ಸರಿಯಾಗಿ ಸ್ಪಂದಿಸದಿರುವುದು ಸೇರಿದಂತೆ ಇವರ ವಿರುದ್ಧ ಸಾರ್ವಜನಿಕ ಹಾಗೂ ಪೊಲೀಸ್ ದೂರುಗಳು ದಾಖಲಾಗಿದ್ದವು.

ಈ ಕುರಿತು ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬೇಳೂರು ಅವರು ಆಯುಕ್ತಾಲಯಕ್ಕೆ ಪತ್ರ ಬರೆದು ವೈದ್ಯರನ್ನು ಬೇರೆ ಜಿಲ್ಲೆಗೆ ವರ್ಗಾಯಿಸುವಂತೆ ಮನವಿ ಮಾಡಿದ್ದರು.

ತನಿಖಾ ವರದಿ ನೀಡಿದ ಡಿಎಚ್‌ಒ: ಶಾಸಕರ ಮನವಿ ಹಾಗೂ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (DHO) ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದರು. ಚಿಕಿತ್ಸೆ ಮತ್ತು ಸರ್ಜರಿ ಸಮಯದಲ್ಲಿ ಅನುಭವಸ್ಥ ವೈದ್ಯರ ನೆರವು ಪಡೆಯಬಹುದಿತ್ತು ಹಾಗೂ ಸಂಕೀರ್ಣ ಪರಿಸ್ಥಿತಿ ಉಂಟಾದಾಗ ಮೇಲ್ಮಟ್ಟದ ಆಸ್ಪತ್ರೆಗೆ ಶಿಫಾರಸು ಮಾಡಬಹುದಿತ್ತು ಎಂದು ತನಿಖಾ ವರದಿಯಲ್ಲಿ ಅಭಿಪ್ರಾಯಪಡಲಾಗಿತ್ತು.

ಸರ್ಕಾರದ ಕ್ರಮ: ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಅಕ್ಟೋಬರ್ 6, 2026 ರಂದು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದ್ದು, ಡಾ. ನಾಗೇಂದ್ರಪ್ಪ ಅವರನ್ನು ತಕ್ಷಣವೇ ಬೆಂಗಳೂರಿನ ಆಯುಕ್ತಾಲಯದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದ್ದಾರೆ.

Dr. Nagendrappa, a gynecologist at Sagara Sub-Divisional Hospital, is transfered  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close