SUDDILIVE || SHIVAMOGGA
ಸಕ್ರೆಬೈಲು ಆನೆ ಬಿಡಾರಕ್ಕೆ ಪಶುವೈದ್ಯರ ನೇಮಕ: ಅರ್ಜಿ ಅವಧಿ ವಿಸ್ತರಣೆ, ಅ.17ಕ್ಕೆ ನೇರ ಸಂದರ್ಶನ- Appointment of veterinarians for Sakrebailu Elephant Camp: Application period extended, live interview on October 17
ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದ ಆನೆಗಳ ಆರೈಕೆ, ಚಿಕಿತ್ಸೆ ಹಾಗೂ ವನ್ಯಜೀವಿ ರಕ್ಷಣಾ ಕಾರ್ಯಗಳಿಗಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ 16ರವರೆಗೆ ವಿಸ್ತರಿಸಲಾಗಿದೆ.
ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಸಕ್ರೆಬೈಲು ಆನೆ ಬಿಡಾರದಲ್ಲಿ ತುರ್ತು ಸಂದರ್ಭಗಳಲ್ಲಿ ವನ್ಯಪ್ರಾಣಿಗಳಿಗೆ ಚಿಕಿತ್ಸೆ ನೀಡುವುದು, ಮರಣೋತ್ತರ ಪರೀಕ್ಷೆ ನಡೆಸುವುದು ಹಾಗೂ ಮಾನವ–ವನ್ಯಪ್ರಾಣಿ ಸಂಘರ್ಷದ ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವುದು ಪಶುವೈದ್ಯರ ಪ್ರಮುಖ ಜವಾಬ್ದಾರಿಗಳಾಗಿವೆ.
ಅಭ್ಯರ್ಥಿಗಳು ಬ್ಯಾಚಲರ್ ಆಫ್ ವೆಟರ್ನರಿ ಸೈನ್ಸ್ ಅಂಡ್ ಅನಿಮಲ್ ಹಸ್ಬೆಂಡ್ರಿ (B.V.Sc & A.H) ಪದವಿ ಪಡೆದಿರಬೇಕು. ವನ್ಯಜೀವಿ ವಿಷಯದಲ್ಲಿ ಸ್ನಾತಕೋತ್ತರ ಪಶುವೈದ್ಯಕೀಯ ಪದವಿ ಪಡೆದವರಿಗೆ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ವನ್ಯಜೀವಿ ಕ್ಷೇತ್ರ ಅಥವಾ ಮೃಗಾಲಯಗಳಲ್ಲಿ ಕೆಲಸದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಸ್ವಯಂ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ವನ್ಯಜೀವಿ ವಿಭಾಗದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಅರ್ಜಿ ನಮೂನೆಯನ್ನು ಶಿವಮೊಗ್ಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಿಂದ ಅಥವಾ sakrebailuelephantcamp.org ವೆಬ್‌ಸೈಟ್ ಮೂಲಕ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ 08182-222983, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಿ.ಬಿ. ಗುರುರಾಜ್ – 9481461553, ವಲಯ ಅರಣ್ಯಾಧಿಕಾರಿ ಅಂಥೋಣಿ ರೇಗೊ – 9632848453 ಅವರನ್ನು ಸಂಪರ್ಕಿಸಬಹುದು ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
Appointment of veterinarians for Sakrebailu Elephant Camp: Application period extended, live interview on October 17
