ಶಿವಮೊಗ್ಗದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ - ಆರೋಪಿಗೆ 20 ವರ್ಷ ಕಠಿಣ ಜೈಲು, 5 ಲಕ್ಷ ಪರಿಹಾರ-Sexual assault case against minor girl in Shivamogga - Accused gets 20 years rigorous imprisonment, Rs 5 lakh compensation

Posco, case

ಶಿವಮೊಗ್ಗ: ತಾಲ್ಲೂಕಿನ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 22 ವರ್ಷದ ಯುವಕನಿಗೆ ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) 20 ವರ್ಷ ಕಠಿಣ ಕಾರಾಗೃಹವಾಸ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಪಿಐ ಶ್ರೀ ಮಂಜುನಾಥ್ ಬಿ. ರವರು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀ ಶ್ರೀಧರ್ ಅವರು ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಮಾನ್ಯ ನ್ಯಾಯಾಧೀಶರಾದ ಶ್ರೀ ನಿಂಗನಗೌಡ ಭ ಪಾಟೀಲ್ ರವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹವಾಸ ಮತ್ತು 1,10,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಜೊತೆಗೆ ಸಂತ್ರಸ್ತ ಅಪ್ರಾಪ್ತ ಬಾಲಕಿಗೆ 5,00,000 ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Sexual assault case against minor girl in Shivamogga - Accused gets 20 years rigorous imprisonment, Rs 5 lakh compensation

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close