ವರದಕ್ಷಿಣೆ ಕಿರುಕುಳ ಪ್ರಕರಣ: ಪತಿ, ಅತ್ತೆಗೆ 10 ವರ್ಷ ಕಠಿಣ ಕಾರಾಗೃಹ-Dowry harassment case: Husband, mother-in-law sentenced to 10 years in rigorous imprisonment

 SUDDILIVE || SHIVAMOGGA

ವರದಕ್ಷಿಣೆ ಕಿರುಕುಳ ಪ್ರಕರಣ: ಪತಿ, ಅತ್ತೆಗೆ 10 ವರ್ಷ ಕಠಿಣ ಕಾರಾಗೃಹ-Dowry harassment case: Husband, mother-in-law sentenced to 10 years in rigorous imprisonment   
Agumbe, dowry


ಶಿವಮೊಗ್ಗ:
ಆಗುಂಬೆ ಠಾಣಾ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಜ್ಯೋತಿ (24) ಅವರ ಸಾವಿಗೆ ಸಂಬಂಧಿಸಿದ ವರದಕ್ಷಿಣೆ ಸಾವು ಹಾಗೂ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಪತಿ ದಯಾಂದ್ (37) ಮತ್ತು ಅತ್ತೆ ಸುಮಿತ್ರ (65) ಅವರಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಜ್ಯೋತಿ ಅವರಿಗೆ ಪತಿ ದಯಾಂದ್ ಮತ್ತು ಅತ್ತೆ ಸುಮಿತ್ರ ಅವರು ವರದಕ್ಷಿಣೆ ಹಣಕ್ಕಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು, ಇದರಿಂದ ಬೇಸತ್ತ ಜ್ಯೋತಿ ಅವರು 2021ರ ಮೇ 23ರಂದು ನೇಣು ಬಿಗಿದುಕೊಂಡು ಮೃತಪಟ್ಟಿದ್ದರು.

ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 51/2021ರ ಅಡಿಯಲ್ಲಿ ವರದಕ್ಷಿಣೆ ಸಾವು ಹಾಗೂ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಡಿವೈಎಸ್‌ಪಿ ಶಾಂತವೀರ್ ಇ. ಅವರು ಆರೋಪಿತರ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪ ಸಾಬೀತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಶವಂತ ಕುಮಾರ್ ಅವರು ಇಬ್ಬರು ಆರೋಪಿತರಿಗೆ ತಲಾ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹2.24 ಲಕ್ಷ ದಂಡ ವಿಧಿಸಿ, ₹2 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

Dowry harassment case: Husband, mother-in-law sentenced to 10 years in rigorous imprisonment

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close