SUDDILIVE || SHIVAMOGGA
ಅಣ್ಣನಗರದ ಚಾನೆಲ್ ಬಳಿ ಯುವಕನ ಶವ ಪತ್ತೆ: ಕೊಲೆ ಶಂಕೆ, ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರ ಭೇಟಿ-Body of a young man found near a channel in Annanagar: Murder suspected, Doddapet police visit the spot
ಶಿವಮೊಗ್ಗ: ನಗರದ ಅಣ್ಣನಗರದ ಚಾನೆಲ್ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ಯುವಕನನ್ನು ಹುಸ್ಮಾನ್ ಅಲಿ (35) ಎಂದು ಗುರುತಿಸಲಾಗಿದೆ. ಮೃತರು ಶಿವಮೊಗ್ಗದ ಅಶೋಕನಗರದ ಗಲ್ಲಿಯ ನಿವಾಸಿ ಎಂದು ತಿಳಿದುಬಂದಿದೆ. ಹುಸ್ಮಾನ್ ಅಲಿ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.
ಹೊರಗಡೆ ಮದ್ಯ ಸೇವಿಸುತ್ತಿದ್ದ ವೇಳೆ ಕೆಲವರ ನಡುವೆ ಗಲಾಟೆ ನಡೆದಿದ್ದು, ಇದೇ ಸಂದರ್ಭದಲ್ಲಿ ಹುಸ್ಮಾನ್ ಅಲಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರಬಹುದೆಂಬ ಶಂಕೆ ಸ್ಥಳೀಯರಿಂದ ವ್ಯಕ್ತವಾಗಿದೆ. ಈ ಘಟನೆ ಅಣ್ಣನಗರದ ಚಾನೆಲ್ ಬಳಿ ನಡೆದಿರುವ ಅನುಮಾನ ವ್ಯಕ್ತವಾಗಿದೆ.
ಆದರೆ ಕೊಲೆ ನಡೆದಿದೆಯೇ, ನಡೆದಿದ್ದರೆ ಅದರ ಹಿಂದಿನ ಉದ್ದೇಶವೇನು, ಘಟನೆಯಲ್ಲಿ ಎಷ್ಟು ಮಂದಿ ಭಾಗಿಯಾಗಿದ್ದಾರೆ ಹಾಗೂ ಇತರೆ ಮಾಹಿತಿಯ ಬಗ್ಗೆ ಎಂಬುದು ಪೊಲೀಸ್ ತನಿಖೆಯಿಂದಲೇ ಸ್ಪಷ್ಟವಾಗಬೇಕಿದೆ.
ವಿಷಯ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಪ್ರಕ್ರಿಯೆ ಸೇರಿದಂತೆ ಘಟನೆಯ ಕುರಿತು ಅಗತ್ಯ ತನಿಖೆ ಕೈಗೊಳ್ಳಲಾಗುತ್ತಿದೆ.
ಹುಸ್ಮಾನ್ ಅಲಿಯವರ ಸಾವಿನ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಿದೆ.
Body of a young man found near a channel in Annanagar: Murder suspected, Doddapet police visit the spot

