ಬಿದರೆ ಬಳಿ ಕೆಎಸ್‌ಆರ್‌ಟಿಸಿ ಬಸ್–ಟ್ಯಾಕ್ಸಿ ಡಿಕ್ಕಿ-KSRTC bus-taxi collision near Bidare

SUDDILIVE || SHIVAMOGGA

ಬಿದರೆ ಬಳಿ ಕೆಎಸ್‌ಆರ್‌ಟಿಸಿ ಬಸ್–ಟ್ಯಾಕ್ಸಿ ಡಿಕ್ಕಿ-KSRTC bus-taxi collision near Bidare    

Bus, taxi



ಶಿವಮೊಗ್ಗ: ಶಿವಮೊಗ್ಗದ ಹೊರವಲಯದ ಬಿದರೆ ಬಳಿ ಸೋಮವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಕ್ಸಿ ನಡುವೆ ಸಂಭವಿಸಿದ ಅಪಘಾತದಲ್ಲಿ ಟ್ಯಾಕ್ಸಿಯಲ್ಲಿದ್ದ 7–8 ಮಂದಿ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ನಡೆದಿದೆ.

ಸೋಮವಾರ ರಾತ್ರಿ ಸುಮಾರು 7.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಭದ್ರಾವತಿಯಿಂದ ಶಿವಮೊಗ್ಗದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಟ್ಯಾಕ್ಸಿ ನಡುವೆ ಬಿದರೆ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಟ್ಯಾಕ್ಸಿಯ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದ 7–8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಲ್ಲಿ ನಾಲ್ವೈದು ಮಂದಿಯನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿದೆ. ಚಿಕಿತ್ಸೆ ಪಡೆದ ಬಳಿಕ ಅವರು ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಮಾಹಿತಿ ತಿಳಿದು ಸ್ಥಳೀಯರು ನೆರವಿಗೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

KSRTC bus-taxi collision near Bidare    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close