ಬಿಜೆಪಿ ಪ್ರತಿಭಟನೆಗೆ ಟಕ್ಕರ್ ನೀಡಲು ಕಾಂಗ್ರೆಸ್ ಸಜ್ಜಾಗಿತ್ತು-ಪೊಲೀಸರೊಂದಿಗೆ ಕಾರ್ಯಕರ್ತರ ವಾಗ್ವಾದ-Congress gears up to confront BJP protest; Activists clash with police

 SUDDILIVE || SHIVAMOGGA

ಬಿಜೆಪಿ ಪ್ರತಿಭಟನೆಗೆ ಟಕ್ಕರ್ ನೀಡಲು ಕಾಂಗ್ರೆಸ್ ಸಜ್ಜಾಗಿತ್ತು-ಪೊಲೀಸರೊಂದಿಗೆ ಕಾರ್ಯಕರ್ತರ ವಾಗ್ವಾದ-Congress gears up to confront BJP protest; Activists clash with police
Confront, congress

Confront, congress

Confront, congress


ಶಿವಮೊಗ್ಗ: ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಹಿನ್ನೆಲೆಯಲ್ಲಿ, ಅವರಿಗೆ ತಿರುಗೇಟು ನೀಡಲು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರೂ ಸಜ್ಜಾಗಿದ್ದರು. ಈ ವೇಳೆ ಪ್ರತಿಭಟನೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಶಿವಮೊಗ್ಗದಲ್ಲಿ ನಡೆದ ಈ ಬೆಳವಣಿಗೆಯ ಸಂದರ್ಭದಲ್ಲಿ ಡಿವೈಎಸ್ಪಿ ಸಂಜೀವ್ ಕುಮಾರ್ ಹಾಗೂ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷ ಮಧುಸೂದನ್ ನಡುವೆ ಮಾತಿನ ಚಕಮಕಿ ನಡೆಯಿತು.

ಸಂಸದನೊಬ್ಬನ ದುರ್ನಡತೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರೆ, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರೂ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಸ್ಥಳದಲ್ಲಿದ್ದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸಿದರು.

ಈ ವೇಳೆ, “ನಾವು ಪ್ರತಿಭಟನೆ ಮಾಡುತ್ತೇವೆ, ನಮ್ಮನ್ನು ಬಿಡಿ ಸರ್” ಎಂದು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದರು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್‌ನವರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸುವುದು ಬೇಡ ಎಂದು ಪೊಲೀಸರು ತಿಳಿಸಿದರು.

ಇದೇ ವೇಳೆ, ಹಿಂದಿನ ದಿನ ಯಾವುದೇ ಮುನ್ಸೂಚನೆ ನೀಡದೆ ಕೇಂದ್ರ ಸಚಿವರ ಕಾರಿಗೆ ಅಡ್ಡ ಬಂದಿದ್ದೀರಿ. ನಿಮ್ಮ ಈ ವರ್ತನೆ ಸರಿಯಲ್ಲ. ಇದೇ ರೀತಿ ನಡೆದುಕೊಂಡರೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸೂಡಾ ಅಧ್ಯಕ್ಷ ಮಧುಸೂದನ್, “ಸರ್, ಪ್ರತಿಭಟನೆ ಮಾಡುವುದು ನಮ್ಮ ಮೂಲಭೂತ ಹಕ್ಕು. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳುತ್ತೀರೋ ತೆಗೆದುಕೊಳ್ಳಿ. ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ” ಎಂದು ಪೊಲೀಸರಿಗೆ ತಿರುಗೇಟು ನೀಡಿದರು.

ಇದಕ್ಕೆ ಪ್ರತಿಯಾಗಿ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು, “ಸರಿ, ನೀವು ಪ್ರತಿಭಟನೆ ಮಾಡಿ. ನಾವು ಏನು ಮಾಡಬೇಕೋ ಅದನ್ನು ಮಾಡುತ್ತೇವೆ” ಎಂದು ಹೇಳಿದ್ದಾರೆ ಎನ್ನಲಾಗಿದೆ.

ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರೂ ಬೀದಿಗಿಳಿಯಲು ಸಜ್ಜಾಗಿದ್ದರಿಂದ ಶಿವಮೊಗ್ಗದಲ್ಲಿ ರಾಜಕೀಯ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಮಧ್ಯಪ್ರವೇಶದ ನಡುವೆಯೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ತಮ್ಮ ನಿಲುವಿಗೆ ಬದ್ಧರಾಗಿದ್ದರು.

Congress gears up to confront BJP protest; Activists clash with police

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close