SUDDILIVE || SHIVAMOGGA
ಶಿವಮೊಗ್ಗ ದಸರಾ: ಅಲ್ಲಮಪ್ರಭು ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ-Shivamogga Dasara: Hudali Puja for the construction of a stage at Allama Prabhu Maidan
ಶಿವಮೊಗ್ಗ: ಮಲೆನಾಡಿನ ಸಾಂಸ್ಕೃತಿಕ ಕಿರೀಟ ಎಂದೇ ಕರೆಯಲಾಗುವ ಪ್ರತಿಷ್ಠಿತ ಶಿವಮೊಗ್ಗ ದಸರಾ ಮಹೋತ್ಸವವನ್ನು ಈ ಬಾರಿ ವೈವಿಧ್ಯಮಯ ಹಾಗೂ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ
ಈ ಹಿನ್ನಲೆಯಲ್ಲಿ ನಗರದ ಅಲ್ಲಮಪ್ರಭು ಮೈದಾನದಲ್ಲಿ ದಸರಾ ಮಹೋತ್ಸವದ ಪ್ರಮುಖ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಇಲ್ಲಿ ನಿರ್ಮಿಸಲಾಗುತ್ತಿರುವ ದಸರಾ ವೇದಿಕೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾರ್ವಜನಿಕರು ಆರಾಮದಾಯಕವಾಗಿ ವೀಕ್ಷಿಸಲು ಅನುಕೂಲವಾಗುವಂತೆ ವೇದಿಕೆ, ವಿಶಾಲ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ, ದಸರಾ ಕಾರ್ಯಕ್ರಮಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಭಾಕರ್ ಪಿ. ಸೇರಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
Shivamogga Dasara: Hudali Puja for the construction of a stage at Allama Prabhu Maidan
