SUDDILIVE || SHIVAMOGGA
ಶಿವಮೊಗ್ಗ ನಗರದಲ್ಲಿ ಅ.8ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ-Disruption in drinking water supply in Shivamogga city on October 8th
ಶಿವಮೊಗ್ಗ: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಸಂಬಂಧಿಸಿದಂತೆ ಭೂಗತ ಕೇಬಲ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೆಸ್ಕಾಂ ವತಿಯಿಂದ ಮಾರ್ಗ ಮುಕ್ತತೆ ಕೋರಲಾಗಿದೆ.
ಇದರಿಂದ ಅ.8ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.
ಕೇಬಲ್ ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಉಂಟಾಗುವ ನೀರು ಸರಬರಾಜಿನ ವ್ಯತ್ಯಯವನ್ನು ಸಾರ್ವಜನಿಕರು ಅರ್ಥಮಾಡಿಕೊಂಡು, ಕಾಮಗಾರಿ ಪೂರ್ಣಗೊಳಿಸಲು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸುವಂತೆ ಶಿವಮೊಗ್ಗದ ಕನನೀಸ ಮತ್ತು ಒಳಚರಂಡಿ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Disruption in drinking water supply in Shivamogga city on October 8th
