ಶಿವಮೊಗ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಬೀದಿ ಬದಿ ವ್ಯಾಪಾರಿಗಳಿಗೆ ಎಚ್ಚರಿಕೆ- Clearance of footpath encroachment in Shivamogga: Warning to street vendors

 SUDDILIVE || SHIVAMOGGA

ಶಿವಮೊಗ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಬೀದಿ ಬದಿ ವ್ಯಾಪಾರಿಗಳಿಗೆ ಎಚ್ಚರಿಕೆ- Clearance of footpath encroachment in Shivamogga: Warning to street vendors   
Foot, path



ಶಿವಮೊಗ್ಗ: ನಗರದ 100 ಅಡಿ ರಸ್ತೆಯಲ್ಲಿರುವ ಶಿವಾಲಯದ ಪಕ್ಕದಲ್ಲಿ ಹಾಗೂ ಲಕ್ಷ್ಮಿ ಟಾಕೀಸ್ ವೃತ್ತದಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ತೆರವುಗೊಳಿಸಿದರು.

100 ಅಡಿ ರಸ್ತೆಯ ಶಿವಾಲಯದ ಪಕ್ಕದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಮಹಾನಗರ ಪಾಲಿಕೆಯ ವತಿಯಿಂದ ಈಗಾಗಲೇ ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಆದರೂ ಕೆಲವರು ಫುಟ್‌ಪಾತ್‌ಗಳ ಮೇಲೆ ವ್ಯಾಪಾರ ನಡೆಸುತ್ತಿದ್ದರಿಂದ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಅಲ್ಲದೆ, ವಾಹನ ಸವಾರರ ಓಡಾಟಕ್ಕೂ ಅಡಚಣೆ ಉಂಟಾಗುತ್ತಿತ್ತು.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 28ರಂದು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಫುಟ್‌ಪಾತ್‌ಗಳ ಮೇಲಿನ ವ್ಯಾಪಾರ ಮಳಿಗೆಗಳು ಹಾಗೂ ಒತ್ತುವರಿಗಳನ್ನು ತೆರವುಗೊಳಿಸಿದರು. ಈಗಾಗಲೇ ಮಳಿಗೆಗಳನ್ನು ಹಂಚಿಕೆ ಮಾಡಿರುವ ಬೀದಿ ಬದಿ ವ್ಯಾಪಾರಿಗಳು ತಮಗೆ ನಿಗದಿಪಡಿಸಿದ ಮಳಿಗೆಗಳಲ್ಲಿಯೇ ವ್ಯಾಪಾರ ನಡೆಸಬೇಕು ಎಂದು ಸೂಚನೆ ನೀಡಿದರು.

ಇದೇ ವೇಳೆ ಲಕ್ಷ್ಮಿ ಟಾಕೀಸ್ ವೃತ್ತದಲ್ಲಿಯೂ ಪಾದಚಾರಿಗಳು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಜಾಹೀರಾತು ಫಲಕಗಳು ಹಾಗೂ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸಲಾಯಿತು.

ಫುಟ್‌ಪಾತ್‌ಗಳು ಪಾದಚಾರಿಗಳ ಸಂಚಾರಕ್ಕೆ ಮುಕ್ತವಾಗಿರಬೇಕು ಎಂಬ ಉದ್ದೇಶದಿಂದ ಕೈಗೊಂಡ ಈ ಕಾರ್ಯಾಚರಣೆಯಿಂದ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಕಲ್ಪಿಸಲಾಯಿತು.

Clearance of footpath encroachment in Shivamogga: Warning to street vendors   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close