ಪ್ರಧಾನಿ ಮೋದಿ, ಗಡ್ಕರಿಗೆ ಸಂಸದ ರಾಘವೇಂದ್ರ ಕೃತಜ್ಞತೆ-MP Raghavendra expresses gratitude to PM Modi, Gadkari

 SUDDILIVE || SHIVAMOGGA

ಶಿವಮೊಗ್ಗ ಹೆದ್ದಾರಿ ಅಭಿವೃದ್ಧಿಗೆ ₹466.74 ಕೋಟಿ ಮಂಜೂರು: ಪ್ರಧಾನಿ ಮೋದಿ, ಗಡ್ಕರಿಗೆ ಸಂಸದ ರಾಘವೇಂದ್ರ ಕೃತಜ್ಞತೆ-MP Raghavendra expresses gratitude to PM Modi, Gadkari

Modi, gratitude

 

ಶಿವಮೊಗ್ಗ: ನಗರ ವ್ಯಾಪ್ತಿಯ ವಾಹನ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬಾಕಿ ಉಳಿದಿರುವ ಬೈಪಾಸ್ ಕಾಮಗಾರಿ ಹಾಗೂ ಹಾಲಿ ಹೆದ್ದಾರಿ ಸುಧಾರಣೆಗೆ ಕೇಂದ್ರ ಸರ್ಕಾರ ₹466.74 ಕೋಟಿ ಅನುದಾನ ಮಂಜೂರು ಮಾಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-206ರ ಬಾಕಿ ಉಳಿದಿರುವ 4.74 ಕಿ.ಮೀ. ಬೈಪಾಸ್ ರಸ್ತೆಯನ್ನು ನಾಲ್ಕು ಪಥವಾಗಿ ನಿರ್ಮಿಸುವುದು ಹಾಗೂ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಹಾಲಿ ಹೆದ್ದಾರಿಯ ಒಂದು ಬಾರಿಯ ಸುಧಾರಣಾ ಕಾಮಗಾರಿಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ, ಶಿವಮೊಗ್ಗ ನಗರ ಹಾಗೂ ಮಲೆನಾಡು ಭಾಗದ ಬಹುಕಾಲದ ಸಂಚಾರ ದಟ್ಟಣೆ ಮತ್ತು ಸಾರಿಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದೊಂದಿಗೆ ನಿರಂತರವಾಗಿ ನಡೆಸಿದ ಪ್ರಯತ್ನಕ್ಕೆ ಇದೀಗ ಫಲ ದೊರೆತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಬೈಪಾಸ್ ಕಾಮಗಾರಿ ಪೂರ್ಣಗೊಂಡ ಬಳಿಕ ದೂರದ ಊರುಗಳಿಗೆ ತೆರಳುವ ವಾಹನಗಳು ಹಾಗೂ ಭಾರಿ ಸರಕು ಸಾಗಣೆ ವಾಹನಗಳು ನಗರದ ಹೊರಭಾಗದಿಂದಲೇ ಸಂಚರಿಸಲು ಅನುಕೂಲವಾಗಲಿದೆ. ಇದರಿಂದ ಶಿವಮೊಗ್ಗ ನಗರದೊಳಗಿನ ವಾಹನ ದಟ್ಟಣೆ ಕಡಿಮೆಯಾಗುವ ಜೊತೆಗೆ ಪ್ರಯಾಣದ ಸಮಯ ಉಳಿತಾಯವಾಗಲಿದೆ. ರಸ್ತೆ ಸುರಕ್ಷತೆಯೂ ಮತ್ತಷ್ಟು ಸುಧಾರಿಸುವ ನಿರೀಕ್ಷೆ ಇದೆ.

ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿಗೆ ಬೃಹತ್ ಮೊತ್ತದ ಅನುದಾನ ಮಂಜೂರು ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕ್ಷೇತ್ರದ ಜನರ ಪರವಾಗಿ ಸಂಸದ ಬಿ.ವೈ. ರಾಘವೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ.

ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

MP Raghavendra expresses gratitude to PM Modi, Gadkari    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close