ಶಿವಮೊಗ್ಗ KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ.ಸ್ವಾಮಿ ವಿರುದ್ಧ FIR ದಾಖಲು-FIR registered against Shivamogga KSOU Regional Director B.M. Swamy

 SUDDILIVE || SHIVAMOGGA

ಶಿವಮೊಗ್ಗ KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ.ಸ್ವಾಮಿ ವಿರುದ್ಧ FIR ದಾಖಲು-FIR registered against Shivamogga KSOU Regional Director B.M. Swamy    
Ksou, fir


ಶಿವಮೊಗ್ಗ:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಾದೇಶಿಕ ನಿರ್ದೇಶಕ ಬಿ.ಎಂ.ಸ್ವಾಮಿ ಸೇರಿದಂತೆ ಸಿಬ್ಬಂದಿ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪರೀಕ್ಷೆಯಲ್ಲಿ ಮೊಬೈಲ್ ಹಾಗೂ ಪುಸ್ತಕಗಳನ್ನು ಬಳಸಿ ಸಾಮೂಹಿಕವಾಗಿ ನಕಲು ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪರೀಕ್ಷಾ ಕೇಂದ್ರದ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿ, ವಿಡಿಯೋಗಳು ವೈರಲ್ ಆಗಿದ್ದವು. ಪ್ರಕರಣ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ಅವರು ತುಂಗಾನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಗೆ ಪ್ರಾದೇಶಿಕ ನಿರ್ದೇಶಕ ಬಿ.ಎಂ.ಸ್ವಾಮಿ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ಸಾಥ್ ನೀಡಿದ್ದಾರೆ ಎಂಬ ಆರೋಪದ ಕುರಿತು ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಈ ಹಿಂದೆ ಪರೀಕ್ಷೆಯ ಮುಖ್ಯ ಅಧೀಕ್ಷಕರಾಗಿದ್ದ ಬಿ.ಎಂ.ಸ್ವಾಮಿ ಅವರನ್ನು ಘಟನೆಗೆ ಸಂಬಂಧಿಸಿದಂತೆ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಬಳಿಕ ಅಮಾನತುಗೊಳಿಸುವ ಕ್ರಮವೂ ಕೈಗೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.

ಇದೀಗ ವಿಶ್ವವಿದ್ಯಾಲಯದ ಕುಲಸಚಿವರ ದೂರಿನ ಆಧಾರದ ಮೇಲೆ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾಮೂಹಿಕ ನಕಲು ಆರೋಪ ಹಾಗೂ ಇದರಲ್ಲಿ ಭಾಗಿಯಾಗಿರುವವರ ಪಾತ್ರದ ಕುರಿತು ತನಿಖೆ ಚುರುಕುಗೊಳಿಸಿದ್ದಾರೆ.

FIR registered against Shivamogga KSOU Regional Director B.M. Swamy    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close