ಶಿವಮೊಗ್ಗ ಕೆಎಸ್‌ಆರ್‌ಟಿಸಿ ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ ವಂಚನೆ ಆರೋಪ- Shimoga KSRTC outsourced workers accused of minimum wage fraud

SUDDILIVE || SHIVAMOGGA

ಶಿವಮೊಗ್ಗ ಕೆಎಸ್‌ಆರ್‌ಟಿಸಿ ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ ವಂಚನೆ ಆರೋಪ-  Shimoga KSRTC outsourced workers accused of minimum wage fraud  

Ksrtc, outsource

ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕ್ಲೀನಿಂಗ್ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ನೀಡದೆ ವಂಚಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಹಲವು ವರ್ಷಗಳಿಂದ ಬಸ್ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ತಿಂಗಳಿಗೆ ಕೇವಲ ₹8 ಸಾವಿರ ವೇತನ ನೀಡಲಾಗುತ್ತಿದೆ. ಆದರೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ₹17,229 ಆಗಿದ್ದು, ಈ ಮೊತ್ತವನ್ನು ಪಾವತಿಸಲಾಗುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ವೇತನದ ಕುರಿತು ಪ್ರಶ್ನಿಸಿದರೆ ಕೆಲಸದಿಂದ ತೆಗೆದುಹಾಕುವುದಾಗಿ ಹಾಗೂ ಬೇರೆಯವರನ್ನು ನೇಮಿಸಿಕೊಳ್ಳುವುದಾಗಿ ಗುತ್ತಿಗೆದಾರರಿಂದ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.


ಇದಲ್ಲದೆ, ಪೂರ್ಣ ತಿಂಗಳು ಕೆಲಸ ಮಾಡಿದ್ದರೂ ಹಾಜರಾತಿಯನ್ನು ಕಡಿಮೆ ತೋರಿಸಲಾಗುತ್ತಿದೆ. ಸರ್ಕಾರದ ನಿಯಮದಂತೆ ಪಿಎಫ್‌ ಸೌಲಭ್ಯ ಕಲ್ಪಿಸಬೇಕಿದ್ದರೂ, ಕಡಿಮೆ ಹಾಜರಾತಿ ತೋರಿಸಿ ಕಡಿಮೆ ಮೊತ್ತದ ಪಿಎಫ್‌ ಹಣ ಪಾವತಿಸಲಾಗುತ್ತಿದೆ ಎಂದು ಕಾರ್ಮಿಕರು ದೂರಿದ್ದಾರೆ.

ವೇತನ, ಹಾಜರಾತಿ ಹಾಗೂ ಪಿಎಫ್‌ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಕಾರ್ಮಿಕರು, ಈ ಕುರಿತು ಸಂಬಂಧಪಟ್ಟ ಕಾರ್ಮಿಕ ಅಧಿಕಾರಿಗಳ ಗಮನಕ್ಕೂ ತಂದರೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ದೂರಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ, ಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಹಾಗೂ ಕಾನೂನುಬದ್ಧ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

Shimoga KSRTC outsourced workers accused of minimum wage fraud  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close