ಅ.2ರಂದು ಶಿವಮೊಗ್ಗದಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ-Ban on animal slaughter and meat sale in Shivamogga on October 2nd

SUDDILIVE || SHIVAMOGGA

ಅ.2ರಂದು ಶಿವಮೊಗ್ಗದಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ-Ban on animal slaughter and meat sale in Shivamogga on October 2nd  

Animal, slaught


ಶಿವಮೊಗ್ಗ: ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸರ್ಕಾರದ ಅಧಿಸೂಚನೆಯನ್ವಯ 2025-26ನೇ ಸಾಲಿನಲ್ಲಿ ಅಕ್ಟೋಬರ್ 2ನ್ನು ‘ಮಾಂಸರಹಿತ ದಿನ’ವೆಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಅಂದು ಪ್ರಾಣಿವಧೆ ನಡೆಸುವುದು ಹಾಗೂ ಮಾಂಸ ಮಾರಾಟ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿ ಮಹಾನಗರ ಪಾಲಿಕೆ ತಿಳುವಳಿಕೆ ಪತ್ರ ಹೊರಡಿಸಿದೆ.

ಹೀಗಾಗಿ ಮಾಂಸ ಮಾರಾಟದ ಉದ್ದಿಮೆದಾರರು ಅಕ್ಟೋಬರ್ 2ರಂದು ತಮ್ಮ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಿ, ಮಾಂಸ ಮಾರಾಟವನ್ನು ಸ್ಥಗಿತಗೊಳಿಸಬೇಕು ಎಂದು ಪಾಲಿಕೆ ಸೂಚಿಸಿದೆ.

ನಿಷೇಧದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ) ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close