SUDDILIVE || SHIVAMOGGA
ಶಿವಮೊಗ್ಗದಲ್ಲಿ ಅ.16ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ- Live interviews for job seekers in Shivamogga on October 16th
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗಾಗಿ ಅಕ್ಟೋಬರ್ 16ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಪಿರಮಲ್ ಫೈನಾನ್ಸ್ ಪ್ರೈ. ಲಿ. ಖಾಸಗಿ ಕಂಪನಿಯು ಈ ಸಂದರ್ಶನದಲ್ಲಿ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರುವ 18ರಿಂದ 35 ವರ್ಷ ವಯೋಮಾನದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನಕ್ಕೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಹಾಜರಾಗಬೇಕು.
ಸಂದರ್ಶನವು ಶಿವಮೊಗ್ಗದ ಸಾಗರ ರಸ್ತೆಯ ಪಂಪಾ ನಗರ, ಗುತ್ಯಪ್ಪ ಕಾಲೋನಿ 2ನೇ ಕ್ರಾಸ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ 9380663606, 9108235132 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
