ಶಿವಮೊಗ್ಗ ಜಿಲ್ಲೆಯಲ್ಲಿ ನಂಬರ್ ಪ್ಲೇಟ್ ಇಲ್ಲದ 72 ದ್ವಿಚಕ್ರ ವಾಹನಗಳ ವಿರುದ್ಧ ಪೊಲೀಸ್ ಕ್ರಮ-Police action against 72 two-wheelers without number plates in Shivamogga district

 SUDDILIVE || SHIVAMOGGA

ಶಿವಮೊಗ್ಗ ಜಿಲ್ಲೆಯಲ್ಲಿ ನಂಬರ್ ಪ್ಲೇಟ್ ಇಲ್ಲದ 72 ದ್ವಿಚಕ್ರ ವಾಹನಗಳ ವಿರುದ್ಧ ಪೊಲೀಸ್ ಕ್ರಮ-Police action against 72 two-wheelers without number plates in Shivamogga district   
Police, action

ಶಿವಮೊಗ್ಗ: ನಂಬರ್ ಪ್ಲೇಟ್ ಅಳವಡಿಸದೆ ವಾಹನ ಚಾಲನೆ ಮಾಡುತ್ತಿದ್ದ ಸವಾರರ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಒಟ್ಟು 72 ದ್ವಿಚಕ್ರ ವಾಹನಗಳನ್ನು ಗುರುತಿಸಿ ಕ್ರಮ ಕೈಗೊಂಡಿದ್ದಾರೆ.

ಸಂಚಾರ ಸುರಕ್ಷತೆಯ ದೃಷ್ಟಿಯಿಂದ ಅಕ್ಟೋಬರ್ 26ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಯಿತು. ಈ ವೇಳೆ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಸದೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಗುರುತಿಸಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಒಟ್ಟು 72 ದ್ವಿಚಕ್ರ ವಾಹನಗಳು ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುತ್ತಿರುವುದು ಪತ್ತೆಯಾಗಿದೆ. ಈ ವಾಹನಗಳ ಚಾಲಕರು ಹಾಗೂ ಮಾಲೀಕರ ವಿರುದ್ಧ ಮೋಟಾರು ವಾಹನ ಕಾಯ್ದೆ (ಐಎಂವಿ ಕಾಯ್ದೆ) ಅಡಿಯಲ್ಲಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

ವಾಹನಗಳಿಗೆ ಮಾನ್ಯತೆ ಹೊಂದಿದ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ನಿಯಮಗಳನ್ನು ಪಾಲಿಸದೆ ವಾಹನ ಚಾಲನೆ ಮಾಡುವುದು ಕಾನೂನು ಉಲ್ಲಂಘನೆಯಾಗುತ್ತದೆ. ಈ ಹಿನ್ನೆಲೆಯಲ್ಲಿ, ಇನ್ನು ಮುಂದೆ ಕಡ್ಡಾಯವಾಗಿ ಮಾನ್ಯತೆ ಹೊಂದಿದ ನಂಬರ್ ಪ್ಲೇಟ್‌ಗಳನ್ನು ಅಳವಡಿಸಿಕೊಂಡೇ ವಾಹನ ಚಲಾಯಿಸುವಂತೆ ಸಂಬಂಧಪಟ್ಟ ಚಾಲಕರು ಹಾಗೂ ಮಾಲೀಕರಿಗೆ ಪೊಲೀಸರು ಸೂಕ್ತ ಎಚ್ಚರಿಕೆ ನೀಡಿದ್ದಾರೆ.

ಸಂಚಾರ ನಿಯಮಗಳ ಪಾಲನೆ ಹಾಗೂ ರಸ್ತೆ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಹನ ಸವಾರರು ತಮ್ಮ ವಾಹನಗಳಿಗೆ ಕಡ್ಡಾಯವಾಗಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Police action against 72 two-wheelers without number plates in Shivamogga district   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close