SUDDILIVE || SHIVAMOGGA
ಶಿವಮೊಗ್ಗ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ: ತುಂಗನಗರಕ್ಕೆ ಮಂಜುನಾಥ್, ಲೋಕಾಯುಕ್ತಕ್ಕೆ ಗುರುರಾಜ್- Transfers in Shivamogga Police Department: Manjunath to Tunganagar, Gururaj to Lokayukta
ಶಿವಮೊಗ್ಗ: ರಾಜ್ಯ ಪೊಲೀಸ್ ಇಲಾಖೆಯಲ್ಲಿ 49 ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (DG&IGP) ಆದೇಶ ಹೊರಡಿಸಿದ್ದಾರೆ.
ಈ ವರ್ಗಾವಣೆ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಪ್ರಮುಖವಾಗಿದೆ.
ಶಿವಮೊಗ್ಗದ ತುಂಗನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಗುರುರಾಜ್ ಕೆ.ಟಿ. ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.
ಅದೇ ರೀತಿ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್ ಅವರನ್ನು ತುಂಗನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಸದ್ಯ ಹೊಸ ಪೊಲೀಸ್ ಇನ್‌ಸ್ಪೆಕ್ಟರ್‌ರನ್ನು ನೇಮಕ ಮಾಡಿಲ್ಲ. ಮುಂದಿನ ದಿನಗಳಲ್ಲಿ ಸೈಬರ್ ಠಾಣೆಗೆ ಹೊಸ ಅಧಿಕಾರಿಯನ್ನು ನಿಯೋಜಿಸುವ ಸಾಧ್ಯತೆ ಇದೆ.
ರಾಜ್ಯಾದ್ಯಂತ ನಡೆದಿರುವ 49 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಆದೇಶದಲ್ಲಿ ಶಿವಮೊಗ್ಗಕ್ಕೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳಿವು.
Transfers in Shivamogga Police Department: Manjunath to Tunganagar, Gururaj to Lokayukta
