SUDDILIVE || SHIVAMOGGA
ಶಿವಮೊಗ್ಗದಲ್ಲಿ ಅ.3 ಮತ್ತು 4ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ- Power outages in various places in Shivamogga on October 3rd and 4th
ಶಿವಮೊಗ್ಗ: ವಿದ್ಯುತ್ ಕಂಬ ತೆರವು, ಕಂಬಗಳ ಬದಲಾವಣೆ ಹಾಗೂ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವಿವಿಧೆಡೆ ಹಾಗೂ ಎಂ.ಆರ್.ಎಸ್. ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಅ.3ರಂದು ಜಯನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ:
ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ನಡೆಯಲಿರುವುದರಿಂದ ಅ.3ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಜಯನಗರ, ಬಸವನಗುಡಿ, ಮಲ್ನಾಡ್ ಇಎನ್‌ಟಿ ಆಸ್ಪತ್ರೆ, ಸರ್ವೋದಯ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಅ.4ರಂದು ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ:
ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ಬದಲಾವಣೆ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಅ.4ರಂದು ಮಧ್ಯಾಹ್ನ 1ರಿಂದ ಸಂಜೆ 6ರವರೆಗೆ ಚಿಕ್ಕಲ್, ಗುರುಪುರ, ಪುರಲೆ, ವೆಂಕಟೇಶ ನಗರ (ಹಸೂಡಿ ರಸ್ತೆ), ಶಾಂತಮ್ಮ ಬಡಾವಣೆ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅ.3ರಂದು ಎಂ.ಆರ್.ಎಸ್. ವ್ಯಾಪ್ತಿಯಲ್ಲೂ ವಿದ್ಯುತ್ ವ್ಯತ್ಯಯ:
ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಡಿವಿಜಿ-1 ಬೇಯಲ್ಲಿ ಅ.3ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಹೊಳೆಹೊನ್ನೂರು, ಹೊಳಲೂರು ಹಾಗೂ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳು, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಜಲ್ಲಿ ಕ್ರಷರ್‌ಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾಮಗಾರಿಗಳ ಹಿನ್ನೆಲೆಯಲ್ಲಿ ಸಂಬಂಧಿಸಿದ ಪ್ರದೇಶಗಳ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
