SUDDILIVE || SHIVAMOGGA
ಫಿಂಗರ್‌ಪ್ರಿಂಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ, ಶಿವಮೊಗ್ಗದ ಪಿಎಸ್‌ಐ ರಘುವೀರ್ ಗೆ ಹಿರಿಮೆ- The state ranks third in the fingerprint test, PSI Raghuveer of Shivamogga wins the award
ಶಿವಮೊಗ್ಗ: ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 8ನೇ ರಾಜ್ಯಮಟ್ಟದ ಪೊಲೀಸ್ ಡ್ಯೂಟಿ ಮೀಟ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ತುಂಗಾನಗರ ಪೊಲೀಸ್ ಠಾಣೆಯ ಪಿಎಸ್‌ಐ ರಘುವೀರ್ ಅವರು ಫಿಂಗರ್‌ಪ್ರಿಂಟ್ ಪ್ರಾಯೋಗಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ರಘುವೀರ್ ಅವರು, Fingerprint Practical Exams ವಿಭಾಗದಲ್ಲಿ ಮೂರನೇ ಸ್ಥಾನ ಗಳಿಸುವ ಮೂಲಕ ತಮ್ಮ ವೃತ್ತಿಪರ ಕೌಶಲವನ್ನು ಪ್ರದರ್ಶಿಸಿದ್ದಾರೆ.
ರಘುವೀರ್ ಅವರ ಸಾಧನೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಐಪಿಎಸ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದಲೂ ಅವರನ್ನು ಅಭಿನಂದಿಸಲಾಗಿದ್ದು, ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.
