ಅಕ್ಟೋಬರ್ 12ರಂದು ಶಿವಮೊಗ್ಗಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ- Union Minister V. Somanna to visit Shivamogga on October 12

 SUDDILIVE || SHIVAMOGGA

ಅಕ್ಟೋಬರ್ 12ರಂದು ಶಿವಮೊಗ್ಗಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ- Union Minister V. Somanna to visit Shivamogga on October 12   
Somanna, visit



ಶಿವಮೊಗ್ಗ:
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಅಕ್ಟೋಬರ್ 12ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಖಾಸಗಿ ಉದ್ಘಾಟನ ಸಮಾರಂಭದಲ್ಲಿ ಭಾಗಿಯಾಗಲಿದ್ದು ನಂತರ  ಜಿಲ್ಲೆಯ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಈ ಸಂಬಂಧ ಅಕ್ಟೋಬರ್ 6ರಂದು ಹೊರಡಿಸಿರುವ ಪರಿಷ್ಕೃತ ಪ್ರವಾಸ ಕಾರ್ಯಕ್ರಮದ ಪ್ರಕಾರ, ಸಚಿವರು ಅಕ್ಟೋಬರ್ 12ರ ಸೋಮವಾರ ಬೆಳಿಗ್ಗೆ ಬೆಂಗಳೂರಿನಿಂದ ರೈಲ್ವೆ ವಿಶೇಷ ವ್ಯವಸ್ಥೆಯ ಮೂಲಕ ಹೊರಟು, ಬೆಳಿಗ್ಗೆ 10.30ಕ್ಕೆ ಶಿವಮೊಗ್ಗ ಟೌನ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 

ಇದಾದ ನಂತರ ಬೆಳಿಗ್ಗೆ 11.30ಕ್ಕೆ ಶಿವಮೊಗ್ಗದ ಸರ್ಕ್ಯೂಟ್ ಹೌಸ್‌ನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೆ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮೈಸೂರು ವಿಭಾಗದ ರೈಲ್ವೆ ವ್ಯವಸ್ಥಾಪಕರು (ಡಿಆರ್‌ಎಂ), ನೈಋತ್ಯ ರೈಲ್ವೆಯ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳು ಭಾಗವಹಿಸಿ ಯೋಜನೆಗಳ ಕುರಿತು ಮಾಹಿತಿ ನೀಡಲಿದ್ದಾರೆ.

ಮಧ್ಯಾಹ್ನ 1.30ಕ್ಕೆ ಶಿವಮೊಗ್ಗದಿಂದ ಹೊರಡುವ ಸಚಿವರು, ಮಧ್ಯಾಹ್ನ 2.30ಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಬೀರೂರಿನಲ್ಲಿ ರೈಲ್ವೆ ಮಾರ್ಗದ ಕಿ.ಮೀ. 212ರಲ್ಲಿರುವ ರಸ್ತೆ ಮೇಲ್ಸೇತುವೆ ಕೆಳಸೇತುವೆ (RUB) ಕಾಮಗಾರಿಯನ್ನು ಪರಿಶೀಲಿಸಲಿದ್ದಾರೆ.

ಬೀರೂರಿನಿಂದ ಬೆಂಗಳೂರಿಗೆ ತೆರಳಿ, ರಾತ್ರಿ 8 ಗಂಟೆಗೆ ವಿಮಾನದ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ. ರಾತ್ರಿ 10.45ಕ್ಕೆ ದೆಹಲಿ ತಲುಪುವ ಕಾರ್ಯಕ್ರಮ ನಿಗದಿಯಾಗಿದೆ.

ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಅಗತ್ಯ ಭದ್ರತೆ, ಸಾರಿಗೆ, ಸ್ವಾಗತ ಸೇರಿದಂತೆ ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ರೈಲ್ವೆ ಸಚಿವರ ಕಚೇರಿ ಸೂಚನೆ ನೀಡಿದೆ. ಸಚಿವರೊಂದಿಗೆ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಆಪ್ತ ಸಹಾಯಕರು ಇರಲಿದ್ದಾರೆ.

Union Minister V. Somanna to visit Shivamogga on October 12  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close