ವಿದ್ಯಾನಗರದ ಪಿಡಿಒ ಮನೆ ಕಳ್ಳತನ ಪ್ರಕರಣ; ಆರೋಪಿಯ ಜೊತೆ ₹1.02 ಕೋಟಿ ಮೌಲ್ಯದ ವಸ್ತು ವಶ-Vidyanagar PDO house theft case; ₹1.02 crore worth of goods seized from accused

 SUDDILIVE || SHIVAMOGGA

ವಿದ್ಯಾನಗರದ ಪಿಡಿಒ ಮನೆ ಕಳ್ಳತನ ಪ್ರಕರಣ; ಆರೋಪಿಯ ಜೊತೆ ₹1.02 ಕೋಟಿ ಮೌಲ್ಯದ ವಸ್ತು ವಶ-Vidyanagar PDO house theft case; ₹1.02 crore worth of goods seized from accused    
Pdo, house

ಶಿವಮೊಗ್ಗ: ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಪಿಡಿಒ ನಿವಾಸದ ಬೀಗ ಮುರಿದು ಚಿನ್ನಾಭರಣ, ಬೆಳ್ಳಿ ವಸ್ತು ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಕೋಟೆ ಠಾಣೆ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

2026ರ ಆಗಸ್ಟ್ 28ರಂದು ವಿದ್ಯಾನಗರದ ಪಿಡಿಒ ನಾಗರಾಜ್ ದಂಪತಿಯ ಮನೆಯಲ್ಲಿ ಬಾಗಿಲಿನ ಬೀಗ ಮುರಿದು ಸುಮಾರು 943 ಗ್ರಾಂ ಚಿನ್ನಾಭರಣ, 500 ಗ್ರಾಂ ಬೆಳ್ಳಿ ವಸ್ತುಗಳು, ₹86 ಸಾವಿರ ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ನೀಡಿದ ದೂರಿನ ಆಧಾರದ ಮೇಲೆ ಕೋಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.175/2026ರಂತೆ ಬಿಎನ್‌ಎಸ್ ಕಲಂ 331(3), 305ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಐಪಿಎಸ್ ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಹಾಗೂ ಶಿವಮೊಗ್ಗ ಉಪವಿಭಾಗದ ಡಿವೈಎಸ್‌ಪಿ ಶೀಲವಂತ ಹೊಸಮನಿ ಅವರ ಮಾರ್ಗದರ್ಶನದಲ್ಲಿ ಕೋಟೆ ಠಾಣೆ ಇನ್ಸ್‌ಪೆಕ್ಟರ್ ಹರೀಶ್ ಕೆ. ಪಟೇಲ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ತನಿಖೆ ನಡೆಸಿದ ತಂಡವು ಹಗರಿಬೊಮ್ಮನಹಳ್ಳಿ ನಿವಾಸಿ ಮೊಹಮ್ಮದ್ ರಫೀಕ್ ಅಲಿಯಾಸ್ ಕರಿಯ ಎಂಬ ಆರೋಪಿಯನ್ನು ಬಂಧಿಸಿದೆ.

ಆರೋಪಿಯಿಂದ ₹80,92,435 ಮೌಲ್ಯದ 558.099 ಗ್ರಾಂ ಚಿನ್ನಾಭರಣ, ₹20 ಲಕ್ಷ ನಗದು ಹಾಗೂ ₹1.85 ಲಕ್ಷ ಮೌಲ್ಯದ ಇತರೆ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ₹1,02,77,435 ಮೌಲ್ಯದ ವಸ್ತುಗಳನ್ನು ಪೊಲೀಸರು ಅಮಾನತುಪಡಿಸಿಕೊಂಡಿದ್ದಾರೆ.

ಪ್ರಕರಣ ಪತ್ತೆ ಕಾರ್ಯದಲ್ಲಿ ಕೋಟೆ ಠಾಣೆ ಪೊಲೀಸರು ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಕಾರ್ಯನಿರ್ವಹಿಸಿದ್ದಾರೆ. ಪ್ರಕರಣವನ್ನು ಯಶಸ್ವಿಯಾಗಿ ಪತ್ತೆ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

Vidyanagar PDO house theft case; ₹1.02 crore worth of goods seized from accused    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close