ನಾಳೆಯೇ ಜಿ.ಪಂ., ತಾ.ಪಂ. ಮೀಸಲು ಪ್ರಾಥಮಿಕ ಕರಡು ಅಧಿಸೂಚನೆ: ಈಶ್ವರ ಖಂಡ್ರೆ- Tomorrow, G.P., T.P. Reserve Preliminary Draft Notification: Eshwara Khandre

 SUDDILIVE || CHIKKAMAGALORE

ನಾಳೆಯೇ ಜಿ.ಪಂ., ತಾ.ಪಂ. ಮೀಸಲು ಪ್ರಾಥಮಿಕ ಕರಡು ಅಧಿಸೂಚನೆ: ಈಶ್ವರ ಖಂಡ್ರೆ-  Tomorrow, G.P., T.P. Reserve Preliminary Draft Notification: Eshwara Khandre 

Eshwar, khandre



ಚಿಕ್ಕಮಗಳೂರು, ಅ.7:
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆಯೊಳಗೆ ಪ್ರಾಥಮಿಕ ಕರಡು ಅಧಿಸೂಚನೆ ಹೊರಬೀಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಬುಧವಾರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲ ಹಂತದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿವೆ ಎಂದು ತಿಳಿಸಿದರು.

ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಪ್ರಾಥಮಿಕ ಕರಡು ಅಧಿಸೂಚನೆ ಪ್ರಕಟಿಸಿದ ಬಳಿಕ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗುವುದು. ಬಳಿಕ ರಾಜ್ಯ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಚುನಾವಣೆ ನಡೆಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ್ದಾಗಿದೆ ಎಂದು ಹೇಳಿದರು.

ವರ್ಷಾಂತ್ಯದೊಳಗೆ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳು ನಡೆಯಲಿವೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖಂಡ್ರೆ, ಪ್ರಸ್ತುತ ಎಸ್‌ಐಆರ್‌ ಪ್ರಕ್ರಿಯೆ ನಡೆಯುತ್ತಿದೆ. ಅಂತಿಮ ಮತದಾರರ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ನೀಡುವಲ್ಲಿ ವಿಳಂಬವಾದರೆ, ಜನವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದರು.

Tomorrow, G.P., T.P. Reserve Preliminary Draft Notification: Eshwara Khandre 


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close